ಬಿಜೆಪಿ ಸಂಸದರಿಗೆ ಸೇರಿದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ 9 ವರ್ಷದ ಬಾಲಕ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ಸಂಭವಿಸಿದೆ.
ಬಿಜೆಪಿ ಸಂಸದ ಹರೀಶ್ ದ್ವಿವೇದಿ ಸೇರಿದ ಕಾರು ಡಿಕ್ಕಿ ಹೊಡೆದ ಪರಿಣಾಮ 2ನೇ ತರಗತಿ ವಿದ್ಯಾರ್ಥಿ ಅಭಿಷೇಕ್ ರಾಜ್ಬರ್ (9) ಮೃತಪಟ್ಟ ದುರ್ದೈವಿ.
ಕಾರು ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಹರ್ದಿಯಾ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅತೀವ ರಕ್ತಸ್ರಾವದಿಂದ ಮೃತಪಟ್ಟಿದ್ದಾನೆ.
ಕಾರು ಡಿಕ್ಕಿ ಹೊಡೆದರೂ ಬಾಲಕನಿಗೆ ರಕ್ಷಿಸದೇ ಕಾರು ಸಮೇತ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


