ಮಹಿಪಾಲುಪರ್ ಮೇಲ್ಸುತುವೆ ಬಿಎಂಡಬ್ಲ್ಯೂ ಐಷಾರಾಮಿ ಕಾರು ಡಿಕ್ಕಿ ಹೊಡೆದ ಪರಿಣಾಮ ಗುರುವಾಂವ್ ನಿವಾಸಿ ಸುಭೇಂದು ಚಟರ್ಜಿ (50) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.
ಟಯರ್ ಸ್ಫೋಟಗೊಂಡ ಪರಿಣಾಮ ಕಾರು ನಿಯಂತ್ರಣ ಕಳೆದುಕೊಂಡು ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.
ಕಾರು ಡಿಕ್ಕಿ ಹೊಡೆದಿದ್ದರಿಂದ ಗಾಯಗೊಂಡಿದ್ದ ಸೈಕ್ಲಿಸ್ಟ್ ಅನ್ನು ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಿ ಮೃತಪಟ್ಟಿದ್ದರು.
ಗುರ್ ಗಾಂವ್ ನಿಂದ ದೆಹಲಿಯ ದೌಲಾ ಕೌನ್ ಗೆ ಸೈಕಲ್ ನಲ್ಲಿ ಸುಭೇಂದು ಚಟರ್ಜಿ ಹೊರಟಿದ್ದರು. ಡಿಕ್ಕಿ ಹೊಡೆದ ಕಾರು ಚಾಲಕ ಯಾರು ಎಂಬುದು ತಿಳಿದು ಬಂದಿಲ್ಲ. ಆದರೆ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy