ಪಂಜಾಬ್‌ನ ಕಿರಾತ್‌ಪುರ ಸಾಹಿಬ್ ಬಳಿ ರೈಲು ಹಳಿ ಮೇಲೆ ಆಟವಾಡುತ್ತಿದ್ದಾಗ ವಲಸೆ ಕಾರ್ಮಿಕರ ಮೂವರು ಮಕ್ಕಳಿಗೆ ರೈಲು ಡಿಕ್ಕಿ ಹೊಡೆದು ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ನಗರದ ಸಟ್ಲೆಜ್ ನದಿಯ ಸೇತುವೆ ಸಮೀಪವಿರುವ ರೈಲು ಹಳಿ ಮೇಲೆ ವಲಸೆ ಕಾರ್ಮಿಕರ 4 ಮಕ್ಕಳು ಆಟವಾಡುತ್ತಿದ್ದಾಗ ದುರ್ಘಟನೆ ನಡೆದಿದೆ. ನಾಲ್ಕನೇ ಮಗು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಕುರಿತು ಪಂಜಾಬ್ ಸರ್ಕಾರ ತನಿಖೆಗೆ ಆದೇಶಿಸಿದೆ.
ಮೃತಪಟ್ಟಿರುವ ಮಕ್ಕಳು 7 ರಿಂದ 11 ವರ್ಷದೊಳಗಿನವರು. ಈ ದುರಂತದ ಬಗ್ಗೆ ಪಂಜಾಬ್ ಶಾಲಾ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ದುಃಖ ವ್ಯಕ್ತಪಡಿಸಿದ್ದಾರೆ. ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.
ಅಪಘಾತದಲ್ಲಿ ಮಕ್ಕಳನ್ನು ಕಳೆದುಕೊಂಡ ಕುಟುಂಬಗಳಿಗೆ ಪರಿಹಾರ ನೀಡುವಂತೆ ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕೋರಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


