ಉತ್ತರ ಪ್ರದೇಶದ ಮೀರತ್‌ನಲ್ಲಿ ಶಿಕ್ಷಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ನಾಲ್ವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿಕ್ಷಕಿ ಬಗ್ಗೆ ವಿದ್ಯಾರ್ಥಿಗಳು ಅಶ್ಲೀಲ ಕಾಮೆಂಟ್ ಮಾಡುತ್ತಿರುವ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದವು.
ಕಿಥೌರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಧನಾ ಇನಾಯತ್‌ಪುರ್ ಹಳ್ಳಿಯ ಶಾಲೆಯಲ್ಲಿ ಘಟನೆ ನಡೆದಿದ್ದು, ಈ ಗುಂಪಿನಲ್ಲಿ ಒಬ್ಬ ವಿದ್ಯಾರ್ಥಿನಿಯೂ ಇದ್ದಾರೆ.
12ನೇ ತರಗತಿಯ ವಿದ್ಯಾರ್ಥಿಗಳು ಬಹಳ ಸಮಯದಿಂದ ತಮಗೆ ಕಿರುಕುಳ ನೀಡುತ್ತಿರುವುದಾಗಿ ಶಿಕ್ಷಕಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.ವಿದ್ಯಾರ್ಥಿಗಳು ಆಕ್ಷೇಪಾರ್ಹ ಮಾತುಗಳನ್ನು ಆಡಿದ್ದಾರೆ. ಶಿಕ್ಷಕಿ ಹಲವು ಬಾರಿ ತಿಳಿ ಹೇಳಿದ್ದರೂ ಪ್ರಯೋಜನವಾಗಿಲ್ಲ ಎಂದು ಠಾಣಾಧಿಕಾರಿ ಅರವಿಂದ್ ಮೋಹನ್ ಶರ್ಮಾ ಹೇಳಿದ್ದಾರೆ.
ಶಾಲಾ ಆವರಣದಲ್ಲಿ ಶಿಕ್ಷಕಿಗೆ ಐ ಲವ್ ಯೂ ಎಂದಿದ್ದಾರೆ. ಆ ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದಾರೆ. ವಶಕ್ಕೆ ಪಡೆದಿರುವ ವಿದ್ಯಾರ್ಥಿಗಳು 16 ವರ್ಷದ ಆಸುಪಾಸಿನಲ್ಲಿದ್ದು, ಬಾಲ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy