ಕೊರಟಗೆರೆ: ತಾಲ್ಲೂಕಿನ ತುಂಬಾಡಿ ಗ್ರಾಮದ ಕೆರೆಗೆ ಈಜಾಡಲು ಹೋದ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಕೊರಟಗೆರೆ ತಾಲೂಕು ಕಸಬಾ ಹೋಬಳಿ ತುಂಬಾಡಿ ಗ್ರಾಮದ ಹೊಸಕೆರೆಯಲ್ಲಿ ನಡೆದಿದೆ.
ತುಮಕೂರು ನಗರದ ಅಂತರಸಹಳ್ಳಿಯ ನಿತೀನ್(11) ಮತ್ತು ಸತ್ಯಮಂಗಲದ ದಿವಾಕರ(45) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಕೆರೆಯಲ್ಲಿ ಈಜಾಡುತ್ತಿದ್ದ ವೇಳೆ ಮುಳುಗುತ್ತಿದ್ದ ಸ್ನೇಹಿತ ಮಗ ನಿತೀನ್ ನನ್ನು ರಕ್ಷಿಸಲು ದಿವಾಕರ ಅವರು ಮುಂದಾಗಿದ್ದಾರೆ. ಈ ವೇಳೆ ಅವರು ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ನೀರಿನಲ್ಲಿ ಮುಳುಗಿದ ಇಬ್ಬರನ್ನೂ ತುಂಬಾಡಿ ಗ್ರಾಮಸ್ಥರು ತಕ್ಷಣ ನೀರಿನಿಂದ ಮೇಲೆತ್ತುವ ಕೆಲಸ ಮಾಡಿದ್ದಾರೆ. ಸಾರ್ವಜನಿಕ ಆಸ್ಪತ್ರೆಗೆ ರವಾನಿಸುವ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ.
ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ತಂಡ ಹೆಚ್ಚಿನ ಚಿಕಿತ್ಸೆಗೆ ಪ್ರಯತ್ನಪಟ್ಟರೂ ಚಿಕಿತ್ಸೆ ಫಲಕಾರಿ ಆಗಿಲ್ಲ. ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಕೊರಟಗೆರೆ ಪೊಲೀಸರ ತಂಡ ಭೇಟಿ ಪರಿಶೀಲನೆ ನಡೆಸಿದ್ದಾರೆ.
ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy