ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನಾಳೇ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಹಿರಿಯ ವಕೀಲ ಮುಕುಲ್ ರೊಹ್ಟಗಿ ಅವರನ್ನ ಭೇಟಿ ಮಾಡಿ ಚರ್ಚಿಸಿದರು.
ಮುಕುಲ್ ರೋಹ್ಟಗಿ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಗಡಿ ವಿವಾದ ಬಗ್ಗೆ ನಾಳೇ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ಇದೆ. ಗಡಿ ವಿವಾದದ ಬಗ್ಗೆ ಮುಕುಲ್ ರೋಹ್ಟಗಿಗೆ ವಿವರಣೆ ನೀಡಿದ್ದೇನೆ. ಮಹಾರಾಷ್ಟ್ರ ಸರ್ಕಾರ ಹಾಕಿದ ಅರ್ಜಿ ಬಗ್ಗೆ ವಿಚಾರಣೆ ನಡೆಯಲಿದೆ. ವಾದಮಂಡನೆಯ ಸಿದ್ಧತೆ ಬಗ್ಗೆ ಮುಕುಲ್ ರೋಹ್ಟಗಿ ತಿಳಿಸಿದ್ದಾರೆ. ಕರ್ನಾಟಕ ಪರ ಸಮರ್ಥವಾಗಿ ವಾದ ಮಂಡಿಸುವ ವಿಶ್ವಾಸವಿದೆ ಎಂದರು.
ಮಹಾರಾಷ್ಟ್ರದಲ್ಲಿ ಕೆಎಸ್ ಆರ್ ಟಿಸಿ ಬಸ್ ಗಳ ಮೇಲೆ ಕಲ್ಲು ತೂರಾಟ ಸಂಬಂಧ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಮಹರಾಷ್ಟ್ರ ಗೃಹ ಇಲಾಖೆ ಜೊತೆ ನಮ್ಮ ಅಧಿಕಾರಿಗಳು ಮಾತನಾಡಿದ್ದಾರೆ ಜತ್ ತಾಲ್ಲೂಕು 42 ಗ್ರಾಮಗಳು ಕರ್ನಾಟಕಕ್ಕೆ ಸೇರುವ ಇಂಗಿತ ವಿಚಾರ ಸಂಬಂಧ, ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸೇರಲು ಕೆಲ ನಿಯಮಗಳಿವೆ. ಮೂಲ ಸೌಕರ್ಯ ಸಿಗದಿದ್ದ ಬಗ್ಗೆ ಬಹಳ ವರ್ಷದಿಂದ ಹೇಳುತ್ತಿದ್ದಾರೆ. ಗಡಿ ವಿವಾದ ಸುಪ್ರೀಂಕೋರ್ಟ್ ನಲ್ಲಿದೆ ಈ ಬಗ್ಗೆ ಸರ್ವಪಕ್ಷ ಸಭೆ ಕರೆದು ಚರ್ಚಿಸುತ್ತೇನೆ. ಸಿದ್ಧರಾಮಯ್ಯ ಈ ಬಗ್ಗೆ ರಾಜಕೀಯವಾಗಿ ಹೇಳಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


