ಉತ್ತರ ಪ್ರದೇಶ ಫಿರೋಜಾಬಾದ್ ಜಿಲ್ಲೆ ಪಾಧಮ್ ಪಟ್ಟಣದಲ್ಲಿ ಮಂಗಳವಾರ ರಾತ್ರಿ ನಡೆದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ 6 ಜನ ಮೃತಪಟ್ಟಿದ್ದಾರೆ.
ಮೃತರಲ್ಲಿ ನಾಲ್ವರು ಮಕ್ಕಳು, ಇಬ್ಬರು ಯುವಕರು. ಕಟ್ಟಡದಲ್ಲಿ ವಿದ್ಯುತ್ ಶಾರ್ಟ್ಸರ್ಕ್ಯೂಟ್ನಿಂದ ಅಗ್ನಿ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಫಿರೋಜಾಬಾದ್ ಜಿಲ್ಲೆಯ ಜಸ್ರಾನಾದ ಪದಮ್ ಪಟ್ಟಣದ ಮುಖ್ಯ ಮಾರುಕಟ್ಟೆಯಲ್ಲಿರುವ ಅಂಗಡಿ ಮತ್ತು ಅದರ ಮೇಲಿನ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಒಂದೇ ಕುಟುಂಬದ ಆರು ಮಂದಿ ಬಲಿಯಾಗಿದ್ದಾರೆ. 18 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿವೆ ಎಂದು ಎಸ್ಪಿ ಆಶಿಶ್ ತಿವಾರಿ ಹೇಳಿದ್ದಾರೆ. ಘಟನೆಯಲ್ಲಿ ಮೂವರನ್ನು ರಕ್ಷಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy