ಅರಣ್ಯಾಧಿಕಾರಿಗಳು ಗಾಳಿಯಲ್ಲಿ ಫೈರಿಂಗ್ ಮಾಡಿ ಎಚ್ಚರಿಕೆ ನೀಡಿದರೆ ಗಂಧಚೋರರು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರದ ಎಚ್.ಎನ್ ಕಾವಲ್ ಮೀಸಲು ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಬುಧವಾರ ಸಂಜೆ ನಾಗಮಂಗಲ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಹಾಸನ ಮೂಲದ ಗಂಧದ ಮರ ಕಳ್ಳರಾದ ಗೋವಿಂದಪ್ಪ ಹಾಗೂ ಆತನ ಮಕ್ಕಳಾದ ಶಂಕರ್ ಮತ್ತು ಕುಮಾರ್ ಗಂಧದ ಮರ ಕಡಿಯಲು ಬಂದಿದ್ದಾರೆ. ಈ ವೇಳೆ ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳು ಗಾಳಿಯಲ್ಲಿ ಗುಂಡು ಹಾರಿಸಿ ಮರಗಳ್ಳರನ್ನು ಬಂಧಿಸಲು ಮುಂದಾಗಿದ್ದಾರೆ. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಸಾಕಯ್ಯ ಅವರ ಮೇಲೆ ಮರಗಳ್ಳರು ಏಕಾಏಕಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಬಳಿಕ ಅಧಿಕಾರಿಗಳು ಮತ್ತೊಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ಗೋವಿಂದಪ್ಪನಿಗೆ ಗುಂಡಿನ ಚೂರುಗಳು ತಗುಲಿ ಗಾಯಗಳಾಗಿವೆ. ಮತ್ತಿಬ್ಬರು ಆರೋಪಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಗಾಯಾಳುಗಳಾದ ಅರಣ್ಯ ಸಿಬ್ಬಂದಿ ಸಾಕಯ್ಯ ಹಾಗೂ ಗುಂಡಿನ ಚೂರುಗಳಿಂದ ಗಾಯಗೊಂಡ ಆರೋಪಿ ಗೋವಿಂದಪ್ಪನಿಗೆ ನಾಗಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


