ಬೆಂಗಳೂರು : ಗ್ರಾಮೀಣ ಪ್ರದೇಶಗಳಲ್ಲಿ ಮನೆಬಾಗಿಲಿಗೆ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸುವ ಮುಖ್ಯಮಂತ್ರಿ ಆರೋಗ್ಯ ವಾಹಿನಿ ಯೋಜನೆಗೆ ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.
ನೆಗಡಿ, ಕೆಮ್ಮು, ಜ್ವರದಂತಹ ಸಾಮಾನ್ಯ ಕಾಯಿಲೆಗಳಿಂದ ಹಿಡಿದು ಮಧುಮೇಹ, ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ಗಂಭೀರ ಕಾಯಿಲೆಗಳಿಗೂ ವೈದ್ಯಕೀಯ ಸೇವೆ ಒದಗಿಸಲು ಆರೋಗ್ಯ ಇಲಾಖೆ ಮುಂದಾಗಿದ್ದು, ಜನವರಿ 1 ರಿಂದ ರಾಜ್ಯದಲ್ಲಿ ಮೊದಲ ಹಂತವಾಗಿ ಬೀದರ್, ಚಾಮರಾಜನಗರ, ಚಿಕ್ಕಮಗಳೂರು ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮುಖ್ಯಮಂತ್ರಿ ಆರೋಗ್ಯ ವಾಹಿನಿ ಯೋಜನೆ ಜಾರಿಗೆ ತರಲಿದೆ.
ಮುಖ್ಯಮಂತ್ರಿ ಆರೋಗ್ಯ ವಾಹಿನಿ ಯೋಜನೆಗಾಗಿ ಬಜೆಟ್ ನಲ್ಲಿ 11 ಕೋಟಿ ರೂ. ಅನುದಾನ ಮೀಸಲಿಡಲಾಗಿತ್ತು. ಯೋಜನೆಯಡಿ ಅಗತ್ಯ ವೈದ್ಯಕೀಯ ಉಪಕರಣಗಳೊಂದಿಗೆ ವೈದ್ಯರು, ಶುಶ್ರೂಷಕರು ಹಾಗೂ ವೈದ್ಯಕೀಯ ಸಿಬ್ಬಂದಿ ಸಂಚಾರಿ ಕ್ಲಿನಿಕ್ ಗಳ ಮೂಲಕ ಜನರ ಮನೆ ಬಾಗಿಲಿಗೆ ತೆರಳಿ ಆರೋಗ್ಯ ತಪಾಸಣೆ ನಡೆಸಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


