ಇಬ್ಬರು ಯುವಕರು ಬಾಲಕಿಗೆ ಬಲವಂತವಾಗಿ ಮದ್ಯ ಕುಡಿಸಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿರುವ ಘಟನೆ ಹೊಸಪೇಟೆ ಸಮೀಪ ನಡೆದಿದೆ.
ಸಿಂಧನೂರು ನಿವಾಸಿಯಾಗಿರುವ ವಿದ್ಯಾರ್ಥಿನಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ನ.25ರಂದು ತಾಯಿಯ ತವರೂರಾದ ಹೊಸ ಪೇಟೆಗೆ ಹೋಗಿದ್ದಳು. ನ.27 ರಂದು ಹೊಸಪೇಟೆಯಿಂದ ಸಿಂಧನೂರಿಗೆ ವಾಪಸ್ ಬರುವಾಗ ಪರಿಚಿತ ಸಚಿನ್ ಎಂಬ ಯುವಕ ಕರೆ ಮಾಡಿ ಆಕೆಯನ್ನು ವಾಪಸ್ ಹೊಸಪೇಟೆಗೆ ಕರೆಸಿಕೊಂಡಿದ್ದಾನೆ.
ಸಚಿನ್ ಮತ್ತು ಆತನ ಗೆಳೆಯ ಇಬ್ಬರೂ ಸೇರಿ ವಿದ್ಯಾರ್ಥಿನಿಯನ್ನು ಅಪಹರಿಸಿ ಅಂಜನಾದ್ರಿ ಬೆಟ್ಟ ಹಾಗೂ ಗಂಗಾವತಿಯತ್ತ ಹೋಗಿ ಮದ್ಯ ಖರೀದಿಸಿ ಗಂಗಾವತಿಯಿಂದ ಹೊಸಪೇಟೆಗೆ ಹೋಗುವ ವೇಳೆ ಕಾರಿನಲ್ಲೆ ಸಚಿನ್ ಆಕೆಗೆ ಬಲವಂತದಿಂದ ಮದ್ಯ ಕುಡಿಸಿ, ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ವಿದ್ಯಾರ್ಥಿನಿಯ ತಾಯಿ ದೂರು ನೀಡಿದ್ದಾರೆ.
ಪಿಎಸ್ ಐ ಸೌಮ್ಯ ಅವರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕಾಗಿ ತನಿಖೆ ಕೈಗೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


