ಕಲಬುರಗಿ ನಗರ ಪೊಲೀಸ್ ಕಮಿಷನರ್ ಡಾ.ವೈ.ಎಸ್ ರವಿಕುಮಾರ್ ಅವರ ಪತ್ನಿ ರೂಪಾಲಿ ಮೂರು ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಆರೋಪಿಸಿದ್ದಾರೆ. ಹಣ ಕೊಡದೆ ಇದ್ದಿದ್ದಕ್ಕಾಗಿ ನನ್ನನ್ನು ಗಡಿಪಾರು ಮಾಡಿದ್ದಾರೆ ಎಂದು ಚಿತ್ತಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಣಿಕಂಠ ರಾಠೋಡ್ ಹೇಳೀದ್ದಾರೆ.
ಸೆ.30 ರಂದು ರೂಪಾಲಿ ಸೇರಿದಂತೆ ಅವರ ತಂಡದಿಂದ ದಾಂಡಿಯಾ ನೈಟ್ ಆಯೋಜಿಸಲಾಗಿತ್ತು. ಮುಂಬೈ ಮೂಲದ ಇವೆಂಟ್ ಕಂಪನಿಗೆ ಮೂರು ಲಕ್ಷ ನೀಡಿದ್ದೆ. ಅನಂತರ ಮತ್ತೆ ಮೂರು ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು, ಕೊಡದೇ ಇದ್ದಾಗ ಅವರ ಪತಿ ನಗರ ಪೊಲೀಸ್ ಕಮಿಷನರ್ ಡಾ.ವೈ ಎಸ್ ರವಿಕುಮಾರ್ ನನ್ನನ್ನು ಸುಳ್ಳು ಪ್ರಕರಣ ದಾಖಲಿಸಿ ಗಡಿಪಾರು ಆದೇಶ ಮಾಡಿದ್ದರು. ನನ್ನ ಹಣ ನನಗೆ ನೀಡಬೇಕು, ಇಲ್ಲದಿದ್ದರೆ ಮೇಲಾಧಿಕಾರಿಗಳಿಗೆ ದೂರು ನೀಡುತ್ತೇನೆ ಎಂದು ರಾಠೋಡ್ ತಿಳಿಸಿದ್ದಾರೆ.
ನನ್ನ ಪತ್ನಿ ದಾಂಡಿಯಾ ನೈಟ್ ಮಾಡಿದ್ದು ನಿಜ, ಅನೇಕರಿಂದ ಸ್ಪಾನ್ಸರ್ ಕೇಳಿದ್ದಾರೆ. ಮಣಿಕಂಠ ರಾಠೋಡ್ರಿಗೂ ಕೇಳಿರಬಹುದು, ಹಣಕ್ಕಾಗಿ ಒತ್ತಾಯ ಮಾಡಿದ್ದಾರೆ ಎನ್ನುವುದು ಸುಳ್ಳು, ಮಣಿಕಂಠ ರಾಠೋಡ್ ಪ್ರಚಾರಕ್ಕಾಗಿ ಸುಳ್ಳು ಆರೋಪ ಮಾಡುತ್ತಿದ್ದಾನೆ. ಆತನ ಮೇಲೆ ಯಾದಗಿರಿ ಜಿಲ್ಲೆಯಲ್ಲಿ ರೌಡಿಶೀಟ್ ಓಪನ್ ಆಗಿದ್ದು, ಮೂವತ್ತು ಕೇಸ್ ಇವೆ. ಹೀಗಾಗಿ ಗಡಿಪಾರು ಆದೇಶ ಮಾಡಲಾಗಿದೆ ಎಂದು ಕಲಬುರಗಿ ನಗರ ಪೊಲೀಸ್ ಕಮಿಷನರ್ ಡಾ.ವೈ ಎಸ್ ರವಿಕುಮಾರ್ ಪ್ರತಿಕ್ರಿಯಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


