ಬೆಂಗಳೂರು : ರಾಜ್ಯದ ಕಬ್ಬು ಬೆಳೆಗಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ರೈತರಿಗೆ ಸರ್ಕಾರ ಎಥೆನಾಲ್ ಮೇಲಿನ ಲಾಭಾಂಶ ನೀಡಲು ನಿರ್ಧರಿಸಿದೆ.
ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಬಾಗಲಕೋಟೆ ಸೇರಿ ಹಲವು ಕಡೆ ಕಬ್ಬು ಬೆಳೆಗಾರರು ಭಾರೀ ಪ್ರತಿಭಟನೆ ನಡೆಸಿದ್ದರು.ರೈತರ ಒತ್ತಡಕ್ಕೆ ಮಣಿದು ಸರ್ಕಾರ ಪ್ರತಿ ಟನ್ ಕಬ್ಬಿಗೆ 50 ರೂ. ನಂತೆ ನೀಡಲು ನಿರ್ಧರಿಸಲಾಗಿದೆ.
ವಿಕಾಸಸೌಧದಲ್ಲಿ ಕಬ್ಬು ನಿಯಂತ್ರಣ ಮಂಡಳಿ ಸಭೆ ನಡೆಸಿದ , ಎಫ್‌ಆರ್ ಪಿ ದರ ಪಾವತಿ ಬಳಿಕ ಪ್ರತಿ ಟನ್ ಗೆ ಹೆಚ್ಚುವರಿಯಾಗಿ 50 ರೂ. ನಂತೆ ಒಟ್ಟು 204.47 ಕೋಟಿ ಬಿಡುಗಡೆ ಮಾಡಿದೆ. ಇಂದೇ ಆದೇಶ ಹೊರಡಿಸುವಂತೆ ಕಬ್ಬು ಅಭಿವೃದ್ದಿ ಆಯುಕ್ತರಿಗೆ ಸಚಿವರು ಸೂಚನೆ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy