ಬಿಜೆಪಿಗೆ ರೌಡಿಗಳು, ದುಡ್ಡಿರುವವರು ಕಾಣುತ್ತಾರೆ, ಹಿಂದುತ್ವಕ್ಕಾಗಿ ದುಡಿದ ನಮ್ಮಂಥವರು ಕಾಣುವುದಿಲ್ಲ ಎಂದು ಶ್ರೀರಾಮಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ರೌಡಿಗಳ ಸೇರ್ಪಡೆ ವಿಚಾರ ಬಿಜೆಪಿ ಪಕ್ಷಕ್ಕೆ ಶೋಭೆ ತರುವುದಿಲ್ಲ. ಹಣ ಇದ್ದವರನ್ನು, ರೌಡಿಗಳನ್ನು, ಗೂಂಡಾಗಳನ್ನು ಪಕ್ಷದೊಳಗೆ ಸೇರಿಸಿಕೊಳ್ಳುತಿದ್ದಾರೆ. ತ್ಯಾಗ, ಬಲಿದಾನ ಮಾಡಿ ಶ್ರಮ ವಹಿಸಿ ದುಡಿದ ಹಿಂದೂ ಕಾರ್ಯಕರ್ತರು ಅವರಿಗೆ ಕಾಣುತ್ತಿಲ್ಲ.
ನಮ್ಮ ಶ್ರೀರಾಮಸೇನೆಯ ಸಿದ್ಧಲಿಂಗ ಶ್ರೀ ಹಾಗೂ ನಾನು ರಾಜಕೀಯ ಪ್ರವೇಶಕ್ಕೆ ನಿರ್ಧಾರ ಮಾಡಿದರೆ ನಿಮಗೆ ಕಾಣುವುದಿಲ್ಲ. ಇಡೀ ಸಮಾಜದ ಸ್ವಾಸ್ಥ್ಯವನ್ನು, ನೈತಿಕತೆಯನ್ನು ಕೆಡಿಸುತ್ತಿರೋದು ಸರಿಯಲ್ಲ ಎಂದು ಕಿಡಿ ಕಾರಿದ್ದಾರೆ.
ಹಿಂದೂ ಸಂಘಟನೆಗಳ ಒಕ್ಕೂಟದಿಂದ 25 ಹಿಂದೂವಾದಿ ಅಭ್ಯರ್ಥಿಗಳನ್ನು ಈ ಬಾರಿಯ ಚುನಾವಣೆಯಲ್ಲಿ ಕಣಕ್ಕಿಸುತ್ತೇವೆ. ಇದರಲ್ಲಿ ಐದು ಸ್ವಾಮೀಜಿಗಳು ಈಗಾಗಲೇ ತಯಾರಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.
ಅಂಜನಾದ್ರಿ ಕ್ಷೇತ್ರದ ಆವರಣದಲ್ಲಿ 500 ಮೀಟರ್ ಅಂತರದಲ್ಲಿ ಅನ್ಯ ಧರ್ಮೀಯರ ವ್ಯಾಪಾರ, ವ್ಯವಹಾರಕ್ಕೆ ಅವಕಾಶ ಕೊಡಬಾರದು. ಅವಕಾಶ ಕೊಟ್ಟರೆ ಹನುಮ ಭಕ್ತರು ಅದಕ್ಕೆ ಉತ್ತರ ಕೊಡುತ್ತಾರೆ ಎಂದಿದ್ದಾರೆ. ಚುನಾವಣೆಗಾಗಿ ಅದು ಮಾಡ್ತೀವಿ, ಇದು ಮಾಡ್ತೀವಿ ಅಂತ ಬೊಗಳೆ ಬಿಡಬೇಡಿ. ಪ್ರಾಮಾಣಿಕವಾಗಿ ಹನುಮ ಸ್ಥಳಕ್ಕೆ ಮಾನ್ಯತೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


