ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ರಾಯಭಾಗ ತಾಲೂಕಿನ ಯಲ್ಪಾರಟ್ಟಿ ಗ್ರಾಮದಲ್ಲಿ ನಡೆದಿದೆ.
ಮಾರುತಿ ಚಿದಾನಂದ ನಾವ್ಹಿ (22) ಸಾವಿಗೀಡಾದ ವಿದ್ಯಾರ್ಥಿ. ಜಮಖಂಡಿಯ ಖಾಸಗಿ ಕಾಲೇಜುಗಳಲ್ಲಿ ಈತ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದನು. ಕಲಿಕೆಯ ಒತ್ತಡದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ ನೋಟಿನಲ್ಲಿ ಬರೆದಿದ್ದಾನೆ.
ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಹಾರುಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


