ಭಾರತ ತಂಡದ ನಾಯಕ ರೋಹಿತ್ ಶರ್ಮ ಫೀಲ್ಡಿಂಗ್ ವೇಳೆ ಹೆಬ್ಬೆರಳಿಗೆ ಬಲವಾದ ಪೆಟ್ಟು ಬಿದ್ದಿದ್ದು, ಬಾಂಗ್ಲಾದೇಶದ ವಿರುದ್ಧದ 2ನೇ ಏಕದಿನ ಪಂದ್ಯದ ನಡುವೆಯೇ ಹೊರನಡೆದಿದ್ದಾರೆ.
ಮೀರ್ ಪುರದಲ್ಲಿ ಬುಧವಾರ ನಡೆದ 2ನೇ ಏಕದಿನ ಪಂದ್ಯದ ವೇಳೆ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಫೀಲ್ಡಿಂಗ್ ವೇಳೆ ರೋಹಿತ್ ಹೆಬ್ಬೆರಳಿಗೆ ಗಾಯವಾಗಿದ್ದು, ಸ್ಕ್ಯಾನಿಂಗ್ ಗಾಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.
ಉಮ್ರಾನ್ ಮಲಿಕ್ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಏಕದಿನ ಕ್ರಿಕೆಟ್ ಗೆ ಮರಳಿದ್ದಾರೆ. ಈಗಾಗಲೇ ಭಾರತ ತಂಡ ಮೊದಲ ಏಕದಿನ ಪಂದ್ಯದಲ್ಲಿ ಸೋಲುಂಡಿದ್ದರಿಂದ ಸರಣಿ ಜೀವಂತವಾಗಿಸಿರಿಸಿಕೊಳ್ಳಲು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy