ಮೀರತ್‌ನ ಇಂಚೋರಿ ಪೊಲೀಸ್ ಠಾಣಾ ವ್ಯಾಪ್ತಿಯ ನಂಗ್ಲಿಶಾ ಗ್ರಾಮದಲ್ಲಿ ರುಂಡವಿಲ್ಲದ ಬಾಲಕನ ಮೃತದೇಹ ಪತ್ತೆಯಾಗಿದ್ದು, ನರ ಬಲಿ ಇರಬಹುದು ಎನ್ನುವ ಅನುಮಾನ ವ್ಯಕ್ತವಾಗಿದೆ.
ಬಾಲಕನನ್ನು ನವೆಂಬರ್ 30 ರಂದು ಪ್ರೀತ್ ವಿಹಾರ್‌ನಲ್ಲಿರುವ ನಿವಾಸದಿಂದ ಅಪಹರಿಸಿ ಹತ್ಯೆ ಮಾಡಲಾಗಿದೆ. ಮೀರತ್‌ನ ಹೊಲವೊಂದರಲ್ಲಿ ರುಂಡ ಇಲ್ಲದ ಶವ ಪತ್ತೆಯಾಗಿದ್ದು, ನರಬಲಿಯೇ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ವಿಚಾರಣೆಯ ಬಳಿಕ ಆರೋಪಿಯು ಮೀರತ್‌ನ ಕಬ್ಬಿನ ಗದ್ದೆಯಲ್ಲಿ ಮಗುವನ್ನು ಎಸೆದಿರುವುದನ್ನು ಒಪ್ಪಿಕೊಂಡಿದ್ದಾನೆ. ಸ್ಥಳೀಯ ಪೊಲೀಸರು ಈಗಾಗಲೇ ತಲೆ ಮತ್ತು ಕೈಕಾಲು ಇಲ್ಲದ ದೇಹವನ್ನು ಪತ್ತೆ ಮಾಡಿದ್ದಾರೆ. ಸಮೀಪದಲ್ಲಿ ತಲೆ ಕೂಡ ಪತ್ತೆಯಾಗಿದೆ. ಬಟ್ಟೆಗಳ ಆಧಾರದ ಮೇಲೆ ಶವವು ಪ್ರೀತ್ ವಿಹಾರ್ ಪ್ರದೇಶದಲ್ಲಿ ಕಾಣೆಯಾದ ಬಾಲಕನದ್ದು ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.
ಬಾಲಕನ ಹತ್ಯೆಯ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬ ಮತ್ತು ಸ್ಥಳೀಯರು ಪ್ರತಿಭಟನೆ ನಡೆಸಿದರು. ಪ್ರೀತ್ ವಿಹಾರ್ ಪ್ರದೇಶದಲ್ಲಿ ರಸ್ತೆಯನ್ನು ತಡೆದರು. ಆಕ್ರೋಶಗೊಂಡ ಪ್ರತಿಭಟನಾಕಾರರು ಗುಂಪನ್ನು ಚದುರಿಸಲು ಯತ್ನಿಸುತ್ತಿದ್ದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy