ಇಬ್ಬರು ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ನಂತರ ತಾಯಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮುಳಬಾಗಿಲಿನ ಅಂಜನಾದ್ರಿ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ.
ಆಂಧ್ರ ಪ್ರದೇಶದ ರಾಮಸಮುದ್ರದ ನಿವಾಸಿ ಜ್ಯೋತಿ ಮಕ್ಕಳಾದ ಉದಯಶ್ರೀ (8) ಹಾಗೂ ಅಕ್ಷರ(6) ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ನಂತರ ತಾನೂ ಬೆಂಕಿ ಹಚ್ಚಿಕೊಂಡಿದ್ದ್ದಾದು, ಆರು ವರ್ಷದ ಹೆಣ್ಣು ಮಗು ಮೃತಪಟ್ಟಿದೆ.
ಮತ್ತೊಂದು ಮಗು ಹಾಗೂ ತಾಯಿ ಸುಟ್ಟಗಾಯಗಳಿಂದ ಸಾವು, ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಮುಳಬಾಗಿಲು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಹೆತ್ತಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಪಿಎಸ್ ಐವೊಬ್ಬರು ಗಾಯಗೊಂಡಿದ್ದ ಮಗುವನ್ನು ಎತ್ತಿಕೊಂಡು ಓಡಿ ಆಸ್ಪತ್ರೆಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಈ ಮಗು ಜೀವನ್ಮರಣದ ನಡುವೆ ಹೋರಾಟ ನಡೆಸಿದೆ.
ಗಂಡ ಬಿಟ್ಟು ಹೋಗಿರೋದಕ್ಕೆ ಮನನೊಂದು ಜ್ಯೋತಿ ಗಂಡನಿಲ್ಲದೇ ಜೀವನ ಸಾಗಿಸೋದಕ್ಕೆ ಕಷ್ಟವಾಗುತ್ತೆ ಎಂದು ನಿರ್ಧರಿಸಿ, ಮೊದಲು ಮಕ್ಕಳನ್ನು ಸಾಯಿಸಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿ ಇಬ್ಬರು ಮಕ್ಕಳೊಂದಿಗೆ ಇಲ್ಲಿಗೆ ಆಗಮಿಸಿದ್ದಳು ಎನ್ನಲಾಗಿದೆ. ಸ್ಥಳಕ್ಕೆ ಮುಳಬಾಗಿಲು ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


