ಹೆಚ್.ಡಿ.ಕೋಟೆ: ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದ್ದು, ಬಾರ್ ಗಳು ತೆರೆಯುವುದಕ್ಕೂ ಮೊದಲೇ ಅಕ್ರಮ ಮದ್ಯ ಮಾರಾಟಗಾರರು ಫೀಲ್ಡಿಗಿಳಿಯುತ್ತಿದ್ದು, ಬೆಳಗ್ಗೆ 6 ಗಂಟೆಯಿಂದಲೇ ಮದ್ಯ ಮಾರಾಟ ಆರಂಭಿಸುತ್ತಿದ್ದಾರೆ.
ಬೆಳ್ಳಂಬೆಳಗ್ಗೆ ಕುಡುಕರು ಮದ್ಯ ಖರೀದಿಗಾಗಿ ಮುಗಿ ಬೀಳುತ್ತಿರುವ ದೃಶ್ಯ ಕಂಡು ಬಂದಿದೆ. ತಾಲೋಕು ಕೇಂದ್ರ ಸ್ಥಾನದ ಬಸ್ ನಿಲ್ದಾಣದ ಎದುರಿನಲ್ಲೇ ಇಂತಹ ದೃಶ್ಯ ಕಂಡು ಬಂದರೆ, ಹಳ್ಳಿಗಳಲ್ಲಿ ಏನು ಸ್ಥಿತಿ ಇರಬಹುದು ಅನ್ನೋ ಮಾತುಗಳು ಘಟನೆಯ ಬೆನ್ನಲ್ಲೇ ಕೇಳಿ ಬಂದಿದೆ.
ಅಕ್ರಮ ಮದ್ಯ ಮಾರಾಟವನ್ನು ಕಂಡೂ ಕಾಣದಂತೆ ಅಬಕಾರಿ ಇಲಾಖೆ ಕುಳಿತಿದೆ ಅನ್ನೋ ಮಾತುಗಳು ಕೇಳಿ ಬಂದಿವೆ. ಖಾಸಗಿ ವಾಹನಗಳ ನಿಲ್ದಾಣ ಬದಿಯಲ್ಲಿರುವ ರಸ್ತೆ ಬದಿ ಹೋಟೆಲ್ ಆಸುಪಾಸಿನಲ್ಲೇ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ. ಈ ಬಗ್ಗೆ ಅಬಕಾರಿ ಅಧಿಕಾರಿಗಳು, ಪೊಲೀಸರಿಗೆ ಮಾಹಿತಿ ನೀಡಿದರೂ ಕ್ರಮಕೈಗೊಳ್ಳುತ್ತಿಲ್ಲ ಅನ್ನೋ ಆರೋಪ ಕೇಳಿ ಬಂದಿದೆ.
ವರದಿ: ಮಲಾರ ಮಹದೇವಸ್ವಾಮಿ, ಹೆಚ್.ಡಿ.ಕೋಟೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


