ಪಶ್ಚಿಮ ದೆಹಲಿಯ ಪಂಜಾಬಿ ಬಾಗ್ ಪ್ರದೇಶದ ಚರಂಡಿಯಲ್ಲಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿ ಅಪರಿಚಿತ ಮಹಿಳೆಯ ಕೊಳೆತ ಮೃತದೇಹ ಸಿಕ್ಕಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಅನುಮಾನಾಸ್ಪದವಾಗಿ ಸೂಟ್ಕೇಸ್ವೊಂದು ಬಿದ್ದಿರುವುದಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿತ್ತು. ಆ ಸೂಟ್ಕೇಸ್ನಿಂದ ದುರ್ವಾಸನೆ ಬರುತ್ತಿರುವುದಾಗಿ ಕರೆ ಮಾಡಿದವರು ತಿಳಿಸಿದ್ದರು.
ಸ್ಥಳಕ್ಕೆ ಧಾವಿಸಿದ ಪೊಲೀಸರ ತಂಡ ಸ್ಥಳೀಯ ಡೈವರ್‌ಗಳ ಸಹಾಯದಿಂದ ಚರಂಡಿಯಿಂದ ಸೂಟ್ಕೇಸ್ ಅನ್ನು ಹೊರತೆಗೆದು ಪರಿಶೀಲಿಸಿದಾಗ ತೀರಾ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಆ ಮಹಿಳೆಯ ವಯಸ್ಸು28ರಿಂದ 30 ವರ್ಷ ಎಂದು ಅಂದಾಜಿಸಲಾಗಿದ್ದು, ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


