ಗಾಲಿ ಜನಾರ್ದನ ರೆಡ್ಡಿ ಬೇರೆ ಪಕ್ಷ ಕಟ್ಟುವುದಿಲ್ಲ, ಒಂದು ವೇಳೆ ಪಕ್ಷ ಕಟ್ಟಿದರೆ ಸ್ನೇಹ ಬೇರೆ ಪಕ್ಷ ಬೇರೆ. ನಾನು ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ. ಸ್ನೇಹ ಮತ್ತು ಪಕ್ಷ ಎರಡನ್ನೂ ಒಟ್ಟಾಗಿಯೇ ಇರುವಂತೆ ಮಾಡುತ್ತೇನೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ‌್ದಾರೆ.
ಜನಾರ್ದನ ರೆಡ್ಡಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ನಾಯಕರಲ್ಲೊಬ್ಬರು. ಅವರು ಈ ಪಕ್ಷವನ್ನು ಬಿಟ್ಟು ಬೇರೆ ಪಕ್ಷ ಕಟ್ಟುವ ಪ್ರಶ್ನೆಯೇ ಇಲ್ಲ. ಪಕ್ಷದೊಳಗೇ ಇರುತ್ತಾರೆ ಎಂದೂ ಪತ್ರಕರ್ತರ ಪ್ರಶ್ನೆಗೆ ರಾಮುಲು ಉತ್ತರಿಸಿದ್ದಾರೆ.
ಸಾರಿಗೆ ಇಲಾಖೆಯ ನಿಗಮಗಳ ಪುನಶ್ಚೇತನಕ್ಕೆ ಪ್ರಯತ್ನಿಸಲಾಗುತ್ತಿದೆ. ಸಿಬ್ಬಂದಿ ಕೊರತೆ ನೀಗಿಸಲು 2 ಸಾವಿರ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುತ್ತದೆ. ಈ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಸಾರಿಗೆಯನ್ನು ಹೆಚ್ಚಿಸಲು ಆದ್ಯತೆ ನೀಡಲಾಗುತ್ತಿದೆ. 30 ಸಾವಿರ ಬಸ್‌ಗಳನ್ನು ಬದಲಾಗಿ ಹೊಸ ಬಸ್ ಖರೀದಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಗಂಗಾವತಿ ನಗರದಲ್ಲಿ ಇತ್ತೀಚೆಗಷ್ಟೇ ಮನೆ ಖರೀದಿ ಮಾಡಿರುವ ಜನಾರ್ದನ ರೆಡ್ಡಿ, ನಗರಸಭೆ ಬಿಜೆಪಿ ಸದಸ್ಯ ರಮೇಶ ಚೌಡ್ಕಿ ಹಾಗೂ ಹಲವು ಮುಖಂಡರ ಮನೆಗೆ ಭೇಟಿ ನೀಡಿದ್ದು, ಜಿಲ್ಲೆಯ ರಾಜಕೀಯ ವಲಯದದಲ್ಲಿ ಚರ್ಚೆಗೆ ಕಾರಣವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


