nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
    • ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿ.12ರಂದು ತುರುವೇಕೆರೆ ತಾಲೂಕಿಗೆ ಪಂಚರತ್ನ ರಥಯಾತ್ರೆ ಆಗಮನ: ಎಂ.ಟಿ.ಕೃಷ್ಣಪ್ಪ ಮಾಹಿತಿ
    ತಾಲೂಕು ಸುದ್ದಿ December 10, 2022

    ಡಿ.12ರಂದು ತುರುವೇಕೆರೆ ತಾಲೂಕಿಗೆ ಪಂಚರತ್ನ ರಥಯಾತ್ರೆ ಆಗಮನ: ಎಂ.ಟಿ.ಕೃಷ್ಣಪ್ಪ ಮಾಹಿತಿ

    By adminDecember 10, 2022No Comments1 Min Read
    TURVEKERE

    ತುರುವೇಕೆರೆ: ತಾಲೂಕಿಗೆ ಇದೇ ತಿಂಗಳು 12ನೇ ತಾರೀಕಿನಂದು ಜಾತ್ಯತೀತ ಜನತಾದಳದ ಪಂಚ ರತ್ನ ರಥಯಾತ್ರೆ ಆಗಮಿಸಲಿದ್ದು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಇನ್ನು ಅನೇಕ ಮುಖಂಡರು ಈ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
    ಈಗಾಗಲೇ ತುಮಕೂರು ಜಿಲ್ಲೆಗೆ ಈ ರಥಯಾತ್ರೆ ಆಗಮಿಸಿ, ಗುಬ್ಬಿ, ಶಿರಾ, ಮಧುಗಿರಿ, ಪಾವಗಡದಲ್ಲಿ ಯಾತ್ರೆ ಮುಗಿದಿದ್ದು, 12ರಂದು ತುರುವೇಕೆರೆ ತಾಲೂಕಿನ, ಗ್ರಾಮಗಳಿಗೆ ಆಗಮಿಸಲಿದೆ ಎಂದು ತಿಳಿಸಿದರು.
    ರಾಜ್ಯದಲ್ಲಿ ಉತ್ತಮ ಗುಣಮಟ್ಟದ ಹಾಗೂ ವ್ಯವಸ್ಥಿತ ಶಿಕ್ಷಣವನ್ನು ಉಚಿತವಾಗಿ ನೀಡುವುದು, ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುವ ಸುಸಜ್ಜಿತ ಹೈಟೆಕ್ ಆಸ್ಪತ್ರೆ ನಿರ್ಮಾಣ, ರೈತರಿಗೆ ಆಧುನಿಕ ತಂತ್ರಜ್ಞಾನದ ಕೃಷಿ ಪದ್ಧತಿ ಅಳವಡಿಕೆ, ಸರಿಯಾದ ಬೆಳೆ ಶೇಖರಣ ವ್ಯವಸ್ಥೆ, ಲಾಭದಾಯಕವಾದ ಮಾರುಕಟ್ಟೆ ವ್ಯವಸ್ಥೆ ಜೊತೆಗೆ ಯುವಜನತೆ ಹಾಗೂ ಮಹಿಳೆಯರಿಗೆ ಉದ್ಯೋಗ ಪಡೆಯಲು ಅಗತ್ಯ ತರಬೇತಿ, ವಸತಿ ಇಲ್ಲದವರಿಗೆ ಸರಕಾರದಿಂದಲೇ ವಸತಿ ಕಟ್ಟಿಸಿ ಕೊಡುವ ಯೋಜನೆ ಹಾಗೂ ಸ್ತ್ರೀಶಕ್ತಿ ಸಂಘದ ಎಲ್ಲಾ ಸಾಲವನ್ನು ಮನ್ನಾ ಮಾಡುವುದು ಈ ಪಂಚರತ್ನ ರಥಯಾತ್ರೆಯ ಮುಖ್ಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.
    ಈ ರಥಯಾತ್ರೆ ತಾಲೂಕಿನ ಗ್ರಾಮಗಳಾದ ದಂಡಿನಶಿವರ, ಸಂಪಿಗೆ ಹೊಸಹಳ್ಳಿ, ಕಲ್ಲೂರು, ಸಿ ಎಸ್.ಪುರ, ಶೆಟ್ಟಿಗೊಂಡನಹಳ್ಳಿ, ಮಾಯಸಂದ್ರ, ಮಾವಿನಕೆರೆ, ಮೇಲಿನಒಳಗೆರಹಳ್ಳಿ, ಸಂಜೆ 5:20ಕ್ಕೆ ದಬ್ಬೇಗಟ್ಟ ಗ್ರಾಮದಲ್ಲಿ ಗ್ರಾಮ ಸಭೆ ನಂತರ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮತ್ತು ಅವರ ತಂಡ ಅಲ್ಲೇ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ ಎಂದು ಅವರು ತಿಳಿಸಿದರು.
    ಸುದ್ದಿಗೋಷ್ಠಿಯಲ್ಲಿ ಮಾಜಿ ಎಪಿಎಂಸಿ ಅಧ್ಯಕ್ಷರಾದ ವಿಜಯಕುಮಾರ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಚಂದ್ರೇಶ್, ಕಲ್ಲಹಳ್ಳಿ ಸಿದ್ದೇಗೌಡರು, ಶಂಕ್ರಣ್ಣ, ಮಂಗಿ ಕುಪ್ಪೆ ಬಸವರಾಜು, ರಾಜೇಂದ್ರ ಮುತ್ತುಗದ ಹಳ್ಳಿ, ಆನಂದ್ ಮುಂತಾದವರು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು, ತುರುವೇಕೆರೆ


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸರಗೂರು ತಾಲೂಕಿನಲ್ಲಿ ಆದಿ ಕರ್ನಾಟಕ ಮಹಾಸಭಾ ಘಟಕ ರಚನೆ: ಪದಾಧಿಕಾರಿಗಳ ಆಯ್ಕೆ

    October 11, 2025

    ಗೃಹಲಕ್ಷ್ಮಿ ಯೋಜನೆ: ಮೃತರ ಖಾತೆಗಳಿಗೂ ಹಣ?

    October 11, 2025

    131 ಕೋಟಿ ವೆಚ್ಚದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ!

    October 11, 2025

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ತುಮಕೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಒಳಮೀಸಲಾತಿ ಹೋರಾಟ ಸಮಿತಿ…

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.