ಬೆಂಗಳೂರು: ಗಡಿ ವಿವಾದ ಕುರಿತು ಮಹಾರಾಷ್ಟ್ರ ಸಂಸದರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಈ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅಮಿತ್ ಶಾ ಅವರನ್ನು ಭೇಟಿಯಾಗುವಂತೆ ಕರ್ನಾಟಕ ಸಂಸದರಿಗೆ ಸೂಚನೆ ನೀಡಿದ್ದಾರೆ. ಜೊತೆಗೆ ತಾವು ಕೂಡ ಸ್ವತಃ ದೆಹಲಿಗೆ ತೆರಳಿ ಮಾತುಕತೆ ನಡೆಸಲು ಮುಂದಾಗಿದ್ದೇವೆ ಎಂದು ತಿಳಿಸಿದ್ದಾರೆ.
ಈಗಾಗಲೇ ಮಹಾರಾಷ್ಟ್ರದ ನಿಯೋಗ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಯಾವುದೇ ವ್ಯತ್ಯಾಸ ಆಗುವುದಿಲ್ಲ. ಈ ಹಿಂದೆ ಕೂಡ ಮಹಾರಾಷ್ಟ್ರ ಈ ರೀತಿಯ ಪ್ರಯತ್ನ ಮಾಡಿದೆ. ಈ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿದೆ. ಗಡಿ ವಿಚಾರದಲ್ಲಿ ನಮ್ಮ ಸರ್ಕಾರ ಯಾವುದೇ ರಾಜೀ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಗಡಿ ವಿಚಾರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸೋಮವಾರ ಭೇಟಿ ಮಾಡುವಂತೆ ರಾಜ್ಯ ಸಂಸದರಿಗೆ ತಿಳಿಸಿದ್ದೇನೆ. ನಾನೂ ಕೂಡ ರಾಜ್ಯದ ನ್ಯಾಯ ಸಮ್ಮತ ನಿಲುವನ್ನು ತಿಳಿಸಲು ಕೇಂದ್ರ ಗೃಹ ಸಚಿವರನ್ನು ಶೀಘ್ರವೇ ಭೇಟಿ ಮಾಡಲಿದ್ದೇನೆ ಎಂದು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


