ಹಿರಿಯ ನಟ ಶರತ್ ಕುಮಾರ್ ತೀವ್ರ ಅಸ್ವಸ್ಥ
ಜನಪ್ರಿಯ ನಟ ಶರತ್ ಕುಮಾರ್, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅತಿಸಾರದಿಂದ ನಿರ್ಜಲೀಕರಣಕ್ಕೆ ಒಳಗಾಗಿದ್ದ ಅವರು ತೀವ್ರ ಅಸ್ವಸ್ಥರಾಗಿದ್ದಾರೆ. ಹೀಗಾಗಿ, ಪ್ರಸ್ತುತ ಚೆನ್ನೈ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪತ್ನಿ ರಾಧಿಕಾ ಮತ್ತು ಮಗಳು ವರಲಕ್ಷ್ಮಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಅವರು ಕನ್ನಡದ ಸಾರಥಿ, ಮೈನಾ, ಸಂತೆಯಲ್ಲಿ ನಿಂತ ಕಬೀರ, ಪುನೀತ್ ರಾಜ್‌ಕುಮಾರ್ ಅಭಿನಯದ ರಾಜಕುಮಾರ, ಸೀತಾರಾಮ ಕಲ್ಯಾಣ ಚಿತ್ರಗಳಲ್ಲಿ ನಟಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


