nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭಾರತ್ ಜೋಡೋ ಯುವ ಸಂಘಗಳ ನೋಂದಣಿಯಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ

    August 20, 2026

    ಕುಣಿಗಲ್: ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    August 20, 2026

    ಆ.21ರಂದು ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ವಿಶೇಷ ಪೂಜೆ

    August 20, 2026
    Facebook Twitter Instagram
    ಟ್ರೆಂಡಿಂಗ್
    • ಭಾರತ್ ಜೋಡೋ ಯುವ ಸಂಘಗಳ ನೋಂದಣಿಯಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ
    • ಕುಣಿಗಲ್: ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಆ.21ರಂದು ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ವಿಶೇಷ ಪೂಜೆ
    • ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಚಿಕ್ಕನಾಯಕನಹಳ್ಳಿ: 5,630 ಅರ್ಜಿಗಳ ಪರಿಷ್ಕರಣೆ ಬಾಕಿ | ಶೇ.93 ಗೃಹಜ್ಯೋತಿ ಯೋಜನೆ ಪರಿಷ್ಕರಣೆ
    • ಆ.23: ಕುಣಿಗಲ್‌ ನಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ
    • ಈ ದಿನದ ಕಥೆಯ ಶೀರ್ಷಿಕೆ:   “ಆಗುವುದೆಲ್ಲಾ ಒಳ್ಳೆಯದಕ್ಕೇ !?”
    • ರುಡ್ ಸೆಟ್ ಸಂಸ್ಥೆ: ಉಚಿತ ತರಬೇತಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿರತೆ ದಾಳಿಗೆ ಒಳಗಾದ ಗಾಯಾಳುಗಳನ್ನು ಭೇಟಿ ಮಾಡಿದ ಡಾ.ಜಿ.ಪರಮೇಶ್ವರ್: ಆ್ಯಂಬುಲೆನ್ಸ್ ಸಮಸ್ಯೆ ಬಗ್ಗೆ ಗರಂ ಆದ ಮಾಜಿ ಡಿಸಿಎಂ
    ಕೊರಟಗೆರೆ December 12, 2022

    ಚಿರತೆ ದಾಳಿಗೆ ಒಳಗಾದ ಗಾಯಾಳುಗಳನ್ನು ಭೇಟಿ ಮಾಡಿದ ಡಾ.ಜಿ.ಪರಮೇಶ್ವರ್: ಆ್ಯಂಬುಲೆನ್ಸ್ ಸಮಸ್ಯೆ ಬಗ್ಗೆ ಗರಂ ಆದ ಮಾಜಿ ಡಿಸಿಎಂ

    By adminDecember 12, 2022No Comments2 Mins Read
    g parameshwar

    ಕೊರಟಗೆರೆ: ತಾಲೂಕಿನ ಇರಕಸಂದ್ರ ಕಾಲೋನಿ ಬಳಿ ಚಿರತೆ ದಾಳಿಯಿಂದ ಗಾಯಗೊಂಡವರು ದಾಖಲಾಗಿರುವ  ಆಸ್ಪತ್ರೆಗೆ, ಮಾಜಿ ಡಿಸಿಎಂ, ಶಾಸಕ ಡಾ.ಜಿ.ಪರಮೇಶ್ವರ್ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

    ಕೊರಟಗೆರೆ ತಾಲೂಕಿನ ನೀಲಗೊಂಡನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಇರಕಸಂದ್ರಕಾಲೋನಿಯ ಗ್ರಾಮದಲ್ಲಿ ಕಳೆದ ಶನಿವಾರ ಬೆಳಿಗ್ಗೆ ಚಿರತೆಯೊಂದು ಬಸ್ ನಿಲ್ದಾಣದ ಸಮೀಪ ಶ್ರೀನಿವಾಸ(60), ರಾಜು(46) ಎನ್ನುವರ ಮೇಲೆ ದಾಳಿ ನಡೆಸಿ, ನಂತರ ಕೆಂಪರಾಜು ಎಂಬುವರ ದನದ ಕೊಟ್ಟಿಗೆಗೆ ನುಗ್ಗಿ ಅಲ್ಲಿ ಹಾಲು ಕರೆಯುತ್ತಿದ್ದ ಚೇತನ್ (15) ಹಾಗೂ ಧನುಷ್ (13) ಎಂಬ ಬಾಲಕರ ಮೇಲೆ ದಾಳಿ ಮಾಡಿತ್ತು.

     ಈ ಘಟನೆ ನಡೆದ ಸಂದರ್ಭದಲ್ಲಿ ಶಾಸಕ ಡಾ.ಜಿ.ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರವರ ಅಭಿನಂದನಾ ಕಾರ್ಯಕ್ರಮಕ್ಕೆ ಕಲಬುರ್ಗಿಗೆ ಹೋಗಿದ್ದರು, ಭಾನುವಾರ ಬೆಳಿಗ್ಗೆ ಬೆಂಗಳೂರಿಗೆ ಬಂದ ಶಾಸಕರು ಹಿಂದೆಯೇ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯ ಗೊಂಡ ಇಬ್ಬರು ಬಾಲಕರ ಮತ್ತು ವೃದ್ದರ ಆರೋಗ್ಯ ವಿಚಾರಿಸಿದರು

    ಇದೇ ವೇಳೆ ತಮ್ಮ ವೈಯಕ್ತಿಕ ಹಣದಿಂದ ಬಾಲಕರ ತಂದೆಗೂ ಹಾಗೂ ವೃದ್ದರಿಗೆ ಚಿಕಿತ್ಸೆಗಾಗಿ ಪರಿಹಾರ ಹಣ ನೀಡಿದರು, ನಂತರ ಬಾಲಕರ ತಂದೆಯಿಂದ ಸಂಪೂರ್ಣ ವಿವರ ಪಡೆದ ಶಾಸಕರು ದಾಳಿಯಾದ ಸಂದರ್ಭದಲ್ಲಿ ಸುಮಾರು ಗಂಟೆಗಳ ಕಾಲ ಆಂಬುಲೆನ್ಸ್ ಬರದೆ ಇದ್ದ ವಿಚಾರ ತಿಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದರಲ್ಲದೇ, ವೈದ್ಯರ ಬಳಿ ವಿಚಾರಿಸಿ, ಕೊರಟಗೆರೆ ವೈದ್ಯಾಧಿಕಾರಿಗೆ ಕರೆ ಮಾಡಿ, ತರಾಟೆಗೆತ್ತಿಕೊಂಡು, ಸಮಸ್ಯೆಯನ್ನು ಸರಿಪಡಿಸುವಂತೆ ಸೂಚನೆ ನೀಡಿದರು.

    ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಶಾಸಕರು, ಘಟನೆಯ ಸಂಪೂರ್ಣ ವಿವರ ಪಡೆದಿದ್ದೇನೆ. ಗಾಯಾಳುಗಳಿಗೆ ಧೈರ್ಯ ತುಂಬಿದ್ದೇನೆ. ಚಿರತೆಯನ್ನು ಹಿಡಿಯುವಂತೆ ಅರಣ್ಯ ಇಲಾಖೆಯವರಿಗೆ ಆದೇಶ ಮಾಡಲಾಗಿದೆ. ಬಹಳ ಬೇಸರದ ಸಂಗತಿ ಏನೆಂದರೆ ಘಟನೆಯಾದ ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು 108 ತುರ್ತು ವಾಹನಕ್ಕೆ ಕರೆ ಮಾಡಿದ್ದಾರೆ. ಆದರೆ ಕರೆ ಸ್ವೀಕರಿಸಿದವರು ತುರ್ತು ವಾಹನಗಳು ಖಾಲಿ ಇಲ್ಲ ಎಂದು ಉತ್ತರ ನೀಡಿದ್ದಾರೆ. ತುರ್ತುವಾಹನದ ಕರೆಯನ್ನು ಪಡೆದ ವ್ಯಕ್ತಿ ಘಟನೆಯ ಗಂಭೀರತೆಯನ್ನು ಅರಿತು ತಕ್ಷಣ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ಕೆರೆಯನ್ನು ವರ್ಗಾವಣೆ ಮಾಡಿ ಈ ಆಸ್ಪತ್ರೆಯಲ್ಲಿ ಇದ್ದ ವಾಹನವನ್ನು ಕಳುಹಿಸಬಹುದಿತ್ತು. ಆದರೆ ಇದು ಹಾಗೆ ಹಾಗಿಲ್ಲ ಇದೊಂದು ಗಂಭೀರ ಲೋಪವಾಗಿದೆ, ಈ ಘಟನೆ ಈ ಆಸ್ಪತ್ರೆಯಲ್ಲಿ ನಡೆದಿದೆಯೋ ಅಧವಾ ಇಡೀ ಇಲಾಖೆಯಲ್ಲಿನ ವ್ಯವಸ್ಥೆಯೇ ಹೀಗೆ ಇದೆಯೋ ತಿಳಿದಿಲ್ಲ, ಇದನ್ನು ಜಿಲ್ಲಾ ವೈದ್ಯಾಧಿಕಾರಿ ಮತ್ತು ಆಯುಕ್ತರ ಬಳಿ ಮಾತನಾಡುವೆ, ಇಲ್ಲಿನ ಸ್ಥಳೀಯ ಆರೋಪದಂತೆ ಸರ್ಕಾರಿ ಆಸ್ಪತ್ರೆಯ ತುರ್ತುವಾಹನಗಳು ಖಾಸಗಿ ತುರ್ತು ವಾಹನಗಳ ಜೋತೆ ಕೈಜೋಡಿಸಿ ಉದ್ದೇಶ ಪೂರ್ವಕವಾಗಿ ಜನರಿಗೆ ತುರ್ತುವಾಹನ ಕಳುಹಿಸದೇ ಇರುವುದು ಕಂಡುಬಂದರೆ ಅವರ ವಿರುದ್ದ ನಿರ್ದಾಕ್ಷಣ ಕ್ರಮಕ್ಕೆ ಕೈಗೊಳ್ಳುವಂತೆ ಇಲಾಖಾ ಹಿರಿಯ ಅಧಿಕಾರಿಗಳಿಗೆ ತಾಕೀತು ಮಾಡಲಾಗುವುದು ಎಂದರು.

    ಈ ಸಂರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಡ್ಲಹಳ್ಳಿ ಅಶ್ವತ್ಥನಾರಾಯಣ, ಅರಕೆರೆ ಶಂಕರ್, ಪ.ಪಂ.ಸದಸ್ಯ ಎ.ಡಿ.ಬಲರಾಮ ಯ್ಯ ಕೆ.ಆರ್.ಓಬಳರಾಜು, ತಾ.ಪಂ.ಉಪಾಧ್ಯಕ್ಷೆ ನರಸಮ್ಮ ನರಸಿಂಹಮೂರ್ತಿ, ಮುಖಂಡರುಗಳಾದ ಚಿಕ್ಕರಂಗಯ್ಯ, ಕಣಿವೆ ಹನುಮಂತರಾಯಪ್ಪ, ರವಿಕುಮಾರ್, ಅರವಿಂದ, ಮಂಜುನಾಥ್ ಸೇರಿದಂತೆ ಇನ್ನಿತರರು ಹಾಜರಿದ್ದರು.

    ವರದಿ : ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ

    August 18, 2026

    ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ

    August 15, 2026

    ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್

    August 15, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಭಾರತ್ ಜೋಡೋ ಯುವ ಸಂಘಗಳ ನೋಂದಣಿಯಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ

    August 20, 2026

    ತುಮಕೂರು: ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ ಮತ್ತು ಅನುಷ್ಠಾನದಲ್ಲಿ ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಯುವಜನರಲ್ಲಿ…

    ಕುಣಿಗಲ್: ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    August 20, 2026

    ಆ.21ರಂದು ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ವಿಶೇಷ ಪೂಜೆ

    August 20, 2026

    ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    August 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.