ಭಾರತೀಯ ಒಲಂಪಿಕ್ ಅಸೋಸಿಯೇಷನ್ ನ ಮೊದಲ ಮಹಿಳಾ ಅಧ್ಯಕ್ಷರಾಗಿ ಪಿ.ಟಿ.ಉಷಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಭಾರತೀಯ ವೇಟ್ ಲಿಫ್ಟಿಂಗ್ ಫೆಡರೇಶನ್ ಅಧ್ಯಕ್ಷ ಸಹದೇವ್ ಯಾದವ್ ಖಜಾಂಚಿಯಾಗಿ ಆಯ್ಕೆಯಾದರೆ, ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ಅಧ್ಯಕ್ಷ ಹಾಗೂ ಮಾಜಿ ಗೋಲ್ ಕೀಪರ್ ಕಲ್ಯಾಣ್ ಚೌಬೆ ಸಹ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣೆ ನಡೆಸದಿದ್ದರೆ ಭಾರತೀಯ ಒಲಂಪಿಕ್ ಅಸೋಸಿಯೇಷನ್ ಅನ್ನು ರದ್ದುಗೊಳಿಸಬೇಕಾಗುತ್ತದೆ ಎಂದು ಅಂತರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಸೂಚನೆ ನೀಡಿದ್ದ ಬೆನ್ನಲ್ಲೇ ಈ ಮಹತ್ವದ ಚುನಾವಣೆ ನಡೆದಿತ್ತು.
ಅಸೋಸಿಯೇಷನ್ ನಿರ್ದೇಶಕರಾಗಿ ಭೂಪೇಂದ್ರ ಸಿಂಗ್ ಬಜ್ವಾ, ಅಮಿತಾಬ್ ಶರ್ಮಾ, ಹರ್ಪಾಲ್ ಸಿಂಗ್ ಹಾಗೂ ರೋಹಿತ್ ರಾಜ್ಪಾಲ್ ಆಯ್ಕೆಯಾಗಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy