ಬೆಳಗಾವಿ: ಜಿಲ್ಲೆಯ ಬಿಎಸ್ ಎಫ್ ಯೋಧ ಸದ್ದಾಂ ಜಮಾದಾರ್ ಅನಾರೋಗ್ಯದಿಂದ ಕರ್ತವ್ಯದಲ್ಲಿ ಇದ್ದಾಗಲೇ ಗುಜರಾತ್‌ನ ಬುಜ್‌ನಲ್ಲಿ ನಿಧನರಾಗಿದ್ದಾರೆ.
ಸದ್ದಾಂ ಅವರು ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದವರು. ಇತ್ತೀಚಿಗೆ ರಜೆ ಪಡೆದು ಊರಿಗೆ ಬಂದು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದರು.
ಸದ್ದಾಂ ಜಮಾದಾರ್ ಅವರಿಗೆ ಇತ್ತೀಚೆಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಆದರೆ ಅಕಾಲಿಕವಾಗಿ ನಿಧನ ಹೊಂದಿದ್ದು, ಅತೀವ ದುಃಖ ಉಂಟಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಅಣ್ಣತಮ್ಮಂದಿರನ್ನು ಅಗಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy