nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್

    February 19, 2026

    ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

    February 19, 2026

    ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು

    February 19, 2026
    Facebook Twitter Instagram
    ಟ್ರೆಂಡಿಂಗ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    • ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ
    • ವೃದ್ಧೆಯ ಚಿನ್ನದ ಸರಕಸಿದು ಪರಾರಿಯಾದ ಕಳ್ಳ: ಬೆಚ್ಚಿಬಿದ್ದ ಜನ
    • ಯಾವ ಪಕ್ಷದಲ್ಲಿ ಬೇಕಾದರೂ ಟಿಕೆಟ್ ತರುವ ಯೋಗ್ಯತೆ ಉಳಿಸಿಕೊಂಡಿದ್ದೇನೆ: ಶಾಸಕ ಎಸ್.ಆರ್.ಶ್ರೀನಿವಾಸ್
    • ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 114 ನಮ್ಮ ಕ್ಲಿನಿಕ್ ಗಳ ಉದ್ಘಾಟನೆ ನಾಳೆ ನಡೆಯಲಿದೆ : ಆರೋಗ್ಯ ಸಚಿವ ಸುಧಾಕರ್ ಹೇಳಿಕೆ
    ರಾಜ್ಯ ಸುದ್ದಿ December 13, 2022

    114 ನಮ್ಮ ಕ್ಲಿನಿಕ್ ಗಳ ಉದ್ಘಾಟನೆ ನಾಳೆ ನಡೆಯಲಿದೆ : ಆರೋಗ್ಯ ಸಚಿವ ಸುಧಾಕರ್ ಹೇಳಿಕೆ

    By adminDecember 13, 2022No Comments2 Mins Read
    Sudhakar

    ಕರ್ನಾಟಕ ಸರ್ಕಾರವು, ದುರ್ಬಲ ವರ್ಗಗಳ ಜನರಿಗೆ, ಅದರಲ್ಲಿಯೂ ವಿಶೇಷವಾಗಿ ಕೊಳಗೇರಿ ನಿವಾಸಿಗಳು, ದಿನಗೂಲಿ ನೌಕರರು ಹಾಗೂ ಸಮಾಜದ ಆರ್ಥಿಕವಾಗಿ ಬಲಹೀನವಾಗಿರುವ ಸಮಾಜದ ಜನರಿಗೆ ಪ್ರಾಥಮಿಕ ಆರೋಗ್ಯಸೇವಾ ಸೌಲಭ್ಯಗಳನ್ನು ಒದಗಿಸುವ ಸಲುವಾಗಿ, ಡಿಸೆಂಬರ್ 14(ನಾಳೆ) ರಂದು 114 ‘ನಮ್ಮ ಕ್ಲಿನಿಕ್’ಗಳನ್ನು ಉದ್ಘಾಟಿಸಲಿದೆ.
    ಈ ಚಿಕಿತ್ಸಾಲಯಗಳಲ್ಲಿ 12 ವಿವಿಧ ರೀತಿಯ ಆರೋಗ್ಯ ಸೇವೆಗಳು ಲಭ್ಯವಿದ್ದು, ಪ್ರತಿ ಕ್ಲಿನಿಕ್‌ ನಲ್ಲಿ ಓರ್ವ ವೈದ್ಯಕೀಯ ಅಧಿಕಾರಿ, ಓರ್ವ ಶುಶ್ರೂಷಕಿ, ಲ್ಯಾಬ್ ಟೆಕ್ನಿಷಿಯನ್ ಹಾಗೂ ಓರ್ವ ‘ಡಿ’ ಗ್ರೂಪ್ ಕಾರ್ಮಿಕರಿರುತ್ತಾರೆ.ಈ ಯೋಜನೆಗೆ ರೂ.೧೫೦ ಕೋಟಿ ವೆಚ್ಚವಾಗಲಿದ್ದು, ಬಹುಪಾಲು ಕ್ಲಿನಿಕ್‌ ಗಳು ಸರ್ಕಾರಿ ಕಟ್ಟಡಗಳಲ್ಲಿ ಕಾರ್ಯನಿರ್ವಹಣೆಯನ್ನು ಆರಂಭಿಸಲಿದೆ.

    “ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿಸೆಂಬರ್ 14ರಂದು ಈ ‘ನಮ್ಮ ಕ್ಲಿನಿಕ್’ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಆರಂಭದಲ್ಲಿ ರಾಜ್ಯಾದ್ಯಂತ ಒಂದೇ ಬಾರಿಗೆ 114 ಕ್ಲಿನಿಕ್‌ ಗಳನ್ನು ಉದ್ಘಾಟಿಸಲಾಗುವುದು. ಇದು ಚರಿತ್ರೆಯಲ್ಲೇ ಮೊಟ್ಟ ಮೊದಲ ಬಾರಿಗೆ ಒಟ್ಟಿಗೆ ೧೦೦ಕ್ಕೂ ಹೆಚ್ಚು ಸಂಖ್ಯೆಯ ಕ್ಲಿನಿಕ್‌ ಗಳನ್ನು ಉದ್ಘಾಟಿಸುತ್ತಿರುವ ಕಾರ್ಯಕ್ರಮವಾಗಿದೆ. ಇದು ಸಾರ್ವಕಾಲಿಕ ದಾಖಲೆಯಾಗಲಿದೆ,” ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.


    Provided by
    Provided by

    ನಮ್ಮ ಸರ್ಕಾರವು ರಾಜ್ಯಾದ್ಯಂತ ಒಟ್ಟು 438 ನಮ್ಮ ಕ್ಲಿನಿಕ್‌ ಗಳನ್ನು ಆರಂಭಿಸಲಿದ್ದು, ಉಳಿದ ಕ್ಲಿನಿಕ್‌ಗಳು ಜನವರಿ ೨೦೨೩ರ ವೇಳೆಗೆ ಕಾರ್ಯಾರಂಭಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಒಟ್ಟು ೨೪೩ ನಮ್ಮ ಕ್ಲಿನಿಕ್‌ ಗಳು ಕಾರ್ಯನಿರ್ವಹಿಸಲಿವೆ. ಈ ಸಂಬಂಧ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಜನವರಿ ಎರಡನೇ ವಾರದ ವೇಳೆಗೆ ಸಾರ್ವಜನಿಕರ ಸೇವೆಗಳು ಆರಂಭವಾಗಲಿವೆ. ಪ್ರತಿ ‘ನಮ್ಮ ಕ್ಲಿನಿಕ್’ ೧೦,೦೦೦ ದಿಂದ ೨೦,೦೦೦ ಜನರಿಗೆ ಸೇವೆಗಳನ್ನು ಒದಗಿಸಲಿವೆ.

    ಈ ಕ್ಲಿನಿಕ್‌ ಗಳಲ್ಲಿ ಲಭ್ಯವಿರುವ ಸೇವೆಗಳೆಂದರೆ ಗರ್ಭಿಣಿಯರು, ಪ್ರಸವಪೂರ್ವ ಚಿಕಿತ್ಸೆ, ನವಜಾತ ಶಿಶು, ಬಾಲ್ಯ ಹಾಗೂ ಹದಿಹರೆಯದವರ ಆರೈಕೆ, ಸಾರ್ವತ್ರಿಕ ಚುಚ್ಚುಮದ್ದು ಸೇವೆಗಳು, ಕುಟುಂಬ ಕಲ್ಯಾಣ, ಸಂತಾನೋತ್ಪತ್ತಿ ನಿಯಂತ್ರಣ, ಸೋಂಕು ಖಾಯಿಲೆಗಳ ನಿರ್ವಹಣೆ, ಸಾಮಾನ್ಯ ಹಾಗೂ ಕಿರು ಆರೋಗ್ಯ ಸೇವೆಗಳು, ಮಧುಮೇಹ, ರಕ್ತದೊತ್ತಡ ನಿರ್ವಹಣೆ, ಗಂಭೀರ ಖಾಯಿಲೆಗಳು, ಬಾಯಿ ಚಿಕಿತ್ಸೆ, ಇತ್ಯಾದಿ.

    ಸ್ತನ ಹಾಗೂ ಗರ್ಭಾಶಯ ಕ್ಯಾನ್ಸರ್, ಕಣ್ಣಿನ ತಪಾಸಣೆಯಂತಹ ತೃತೀಯ ಆರೈಕೆಯ ಅಗತ್ಯವಿರುವಂತಹ ರೋಗಿಗಳಿಗೆ ಇತರೆ ಆಸ್ಪತ್ರೆಗಳಿಗೆ ಉಚಿತ ರೆಫೆರೆಲ್‌ ಗಳನ್ನೂ ಸಹ ಮಾಡುವ ವ್ಯವಸ್ಥೆ ಇರುತ್ತದೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.ಹಿರಿಯ ನಾಗರೀಕರ ಚಿಕಿತ್ಸೆ, ತುರ್ತು ವೈದ್ಯಕೀಯ ಸೇವೆಗಳು, ಆರೋಗ್ಯ ತಪಾಸಣೆಗಳು ಹಾಗೂ ಔಷಧಗಳನ್ನು ಉಚಿತವಾಗಿ ಒದಗಿಸಲಾಗುವುದು. ಈ ನಮ್ಮ ಕ್ಲಿನಿಕ್‌ ಗಳಿಗಾಗಿ ೧೪ ಪ್ರಯೋಗಾಲಯ ತಪಾಸಣೆಗಳು, ಟೆಲಿಕನ್ಸಲ್ಟೇಷನ್ ಸೇವೆಗಳು, ಯೋಗಕ್ಷೇಮ ಚಟುವಟಿಕೆಗಳನ್ನೂ ಸಹ ಉಚಿತವಾಗಿ ಒದಗಿಸಲಾಗುವುದು.

    ಈ ನಮ್ಮ ಕ್ಲಿನಿಕ್‌ ಗಳಲ್ಲಿ ಸೇವೆ ಸಲ್ಲಿಸುವ ಸಲುವಾಗಿ ಈಗಾಗಲೇ 300 ವೈದ್ಯರನ್ನು ನೇಮಕ ಮಾಡಿದ್ದು, ಕೆಲವು ಸ್ಥಳಗಳಲ್ಲಿ ವೈದ್ಯರ ಕೊರತೆ ಇದೆ. ಇಂತಹ ಸ್ಥಳಗಳಲ್ಲಿ ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗಿದೆ ಹಾಗೂ ಕಡ್ಡಾಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸುವಂತಹ ೮೦-೧೦೦ ವೈದ್ಯರನ್ನು ನೇಮಕ ಮಾಡಲಾಗುವುದು ಎಂದು ಸುಧಾಕರ್ ತಿಳಿಸಿದರು.

    ಸುದ್ದಿ ಮೂಲ: ಡೆಕ್ಕನ್ ಹೆರಾಲ್ಡ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpagaxhmLTkOnd50sAy

    admin
    • Website

    Related Posts

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್

    February 19, 2026

    ತುಮಕೂರು: ಕಂಪನಿಯೊಂದರ ಲೆಟರ್ ಹೆಡ್, ಮೊಹರು, ಸಹಿ ನಕಲು ಮಾಡಿ ಸುಳ್ಳು ಅನುಭವ ಪ್ರಮಾಣ ಪತ್ರ ಪಡೆದ ಆರೋಪದ ಮೇರೆಗೆ…

    ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

    February 19, 2026

    ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು

    February 19, 2026

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.