ಬೆಂಗಳೂರು : 2014-15 ನೇ ಸಾಲಿನ ಶಿಕ್ಷಕರ ನೇಮಕಾತಿ ಹಗರಣ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಮತ್ತೆ ನಾಲ್ವರು ಶಿಕ್ಷಕರನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 64 ಕ್ಕೆ ಏರಿಕೆಯಾಗಿದೆ.
ಶಿಕ್ಷಕರ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ, ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸಿ ಮತ್ತೆ ನಾಲ್ವರು ಶಿಕ್ಷಕರನ್ನು ಬಂಧಿಸಿದೆ.
ವಿಜಯಪುರ ಜಿಲ್ಲೆಯ ಕಪನಿಂಬರಗಿ ಜಿಎಚ್‌ಎಸ್ ಶಾಲೆಯ ಪ್ರತಾಪ್ ಸಿಂಗ್, ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ವಿಜಯಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಟಿ. ಯೋಗೇಶ್ವರಪ್ಪ, ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸೋಮನಗೌಡ ಪಾಟೀಲ್ ಬಂಧಿತರಾಗಿದ್ದಾರೆ.
ಸದ್ಯ ಬಂಧಿತರನ್ನು ವಿಚಾರಣೆ ನಡೆಸಲಾಗಿದ್ದು, ಬಳಿಕ ನ್ಯಾಯಾಲಯದ ಮುಂದೆ ಆರೋಪಿ ಶಿಕ್ಷಕರನ್ನು ಹಾಜರುಪಡಿಸಿರುವ ಕೋರ್ಟ್ ಆದೇಶದ ಮೇರೆಗೆ ಸಿಐಡಿ ಅಧಿಕಾರಿಗಳು ಬಂಧಿತ ಶಿಕ್ಷಕರನ್ನು ಜೈಲಿಗೆ ಹಾಕಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy