ದೀನದಯಾಳ ಅಂತ್ಯೋದಯ (ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ 03 ಹುದ್ದೆಗಳನ್ನು ಸೃಜಿಸಿ ಗೌರವಧನ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಸ್ವ-ಸಹಾಯ ಸಂಘಗಳ ಸದಸ್ಯರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಅರ್ಹತೆ:
ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಸಮಿತಿಯ ನಿರ್ಣಯವೇ ಅಂತಿಮವಾಗಿದ್ದು
ಹುದ್ದೆಯ ಹೆಸರು ಸಮುದಾಯ ಸಂಪನ್ಮೂಲ ವ್ಯಕ್ತಿ, ಒಟ್ಟು ಹುದ್ದೆಗಳ ಸಂಖ್ಯೆ 3 (ಮೂರು), ಗೌರವಧನ ಮಾಸಿಕ ರೂ. 8000, ಟಿಎ ಗರಿಷ್ಟ ರೂ. 2000 ನೀಡಲಾಗುವುದು, ಕನಿಷ್ಠ ಪಿಯುಸಿ ತೇರ್ಗಡೆಯಾಗಿರಬೇಕು, ಒಂದು ವೇಳೆ ಹೆಚ್ಚುವರಿ ವಿಧ್ಯಾರ್ಹತೆ ಹೊಂದಿದ್ದಲ್ಲಿ ಅಂತಹ ಸದಸ್ಯರಿಗೂ ಸಹ ಆಧ್ಯತೆ ನೀಡಲಾಗುವುದು
ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು (ಪ್ರಮಾಣ ಪತ್ರ ಹೊಂದಿರಬೇಕು), ನಿಪ್ಪಾಣ ನಗರಸಭೆ ಡೇ-ನಲ್ಮ್ ಯೋಜನೆಯಡಿ ರಚಿಸಿದ ಸ್ವ-ಸಹಾಯ ಸಂಘದಲ್ಲಿ ಕನಿಷ್ಟ 3 ವರ್ಷದಿಂದ ಸದಸ್ಯೆರಾಗಿರಬೇಕು/ಪ್ರದೇಶದ ಮಟ್ಟದ ಒಕ್ಕೂಟದ ಸದಸ್ಯರಾಗಿರಬೇಕು.
ಸ್ವ-ಸಹಾಯ ಸಂಘದಲ್ಲಿ ಆಂತರಿಕ ಸಾಲ ಪಡೆದು ಸಕಾಲದಲ್ಲಿ ಮರು ಪಾವತಿಸಿರಬೇಕು, ಸ್ವ-ಸಹಾಯ ಸಂಘದಲ್ಲಿ ಆಂತರಿಕ ಸಾಲ ಪಡೆದು ಬಾಕಿದಾರರಾಗಿರಬಾರದು.
ಆಸಕ್ತ ಅಭ್ಯರ್ಥಿಗಳು ಕಾರ್ಯಾಲಯದ ಅವಧಿಯಲ್ಲಿ ಡೇ-ನಲ್ಮ್ ಯೋಜನೆಯ ಸಮುದಾಯ ಸಂಘಟನಾಧಿಕಾರಿಗಳನ್ನು ಸಂಪರ್ಕಿಸಿ ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಧೃಡಿಕೃತ ದಾಖಲೆಗಳೊಂದಿಗೆ ಡಿಸೆಂಬರ್ 28 ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಲು ಸಲ್ಲಿಸಬಹುದಾಗಿದೆ.
ಅವಧಿ ಮೀರಿ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ನಿಪ್ಪಾಣಿ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy