ಬೆಂಗಳೂರು : ಸದ್ಯಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ಈ ಮೂಲಕ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದೆ.
ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆಯಾಗಲಿದೆ ಎಂಬ ಮಾತು ಕೇಳಿಬಂದಿದ್ದವು. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಪ್ರಸ್ತಾಪಕ್ಕೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ತೋರಿಸಿಲ್ಲ. ಹೀಗಾಗಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಸ್ತಾಪಕ್ಕೆ ಬಹುತೇಕ ತೆರೆಬಿದ್ದಿದೆ.
ಇನ್ನು ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ , ಸಂಪುಟ ವಿಸ್ತರಣೆ ಸಂಬಂಧ ತಾವು ಪ್ರಸ್ತಾಪಿಸಿದ್ದು, ಅದರ ಅವಶ್ಯಕತೆ ಏನಿದೆ. ಈ ಬಗ್ಗೆ ಮತ್ತೊಮ್ಮೆ ಚರ್ಚಿಸಿ ತಿಳಿಸುವುದಾಗಿ ವರಿಷ್ಠರು ತಿಳಿಸಿದ್ದಾರೆ ಎಂದು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy