nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    • ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
    • ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
    • ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
    • ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
    • ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
    • ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉಂಡೆ ಕೊಬ್ಬರಿ ಬೆಳೆಗಾರರ ನೆರವಿಗೆ ಬರಲು ಟೂಡಾ ಶಶಿಧರ್ ಆಗ್ರಹ.
    ಜಿಲ್ಲಾ ಸುದ್ದಿ December 17, 2022

    ಉಂಡೆ ಕೊಬ್ಬರಿ ಬೆಳೆಗಾರರ ನೆರವಿಗೆ ಬರಲು ಟೂಡಾ ಶಶಿಧರ್ ಆಗ್ರಹ.

    By adminDecember 17, 2022No Comments2 Mins Read
    kobbari

    ತಿಪಟೂರು: ಉಂಡೆ ಕೊಬ್ಬರಿಯ ಬೆಲೆ ಕುಸಿಯುತ್ತಿರುವ ಸಂದರ್ಭದಲ್ಲಿ ಹಾಗೂ ಅವೈಜ್ಞಾನಿಕವಾಗಿ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುತ್ತಿರುವ ಬಗ್ಗೆ ಸೂಕ್ತ ಕ್ರಮ ಕೈಗೊಂಡು ನೆರವಿಗೆ ಬರುವ ನಿಟ್ಟಿನಲ್ಲಿ ಸರಕಾರದ ಗಮನ ಸೆಳೆಯಲು ಆಗ್ರಹಿಸಿ ಇಲ್ಲಿನ ಕಾಂಗ್ರೆಸ್ ಮುಖಂಡ ಸಿ. ಬಿ. ಟೂಡಾ ಶಶಿಧರ್ ಅವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.

    ತುಮಕೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಬೆಂಗಳೂರು, ಶಿವಮೊಗ್ಗ ಜಿಲ್ಲೆಯ ರೈತರು ತೆಂಗನ್ನು ಹೆಚ್ಚು ಬೆಳೆಯುತ್ತಾರೆ. ಇದರಲ್ಲಿ ತುಮಕೂರು ಜಿಲ್ಲೆಯ ರೈತರಿಗೆ ಸಂಪೂರ್ಣವಾಗಿ ತೆಂಗು ಆರ್ಥಿಕ ಬೆಳೆ ಹಾಗೂ ಅದೇ ಜೀವನಾಧಾರವಾಗಿದೆ. ಪ್ರಮುಖವಾಗಿ ತಿಪಟೂರು ರೈತರು ಬಲಿತ ತೆಂಗಿನ ಕಾಯಿಯಿಂದ ವಿಶ್ವದಲ್ಲೇ ಅತೀ ವಿಶಿಷ್ಟವಾದ ಉಂಡೆ ಕೊಬ್ಬರಿ ತಯಾರಿಸುತ್ತಾರೆ. ಈ ರೀತಿ ತಯಾರಿಸಿದ ಉಂಡೆ ಕೊಬ್ಬರಿಯನ್ನು ರೈತರು ಕೃಷಿ ಉತ್ಪನ್ನ ಮಾರುಕಟ್ಟೆಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡುತ್ತಾರೆ. ಉಂಡೆ ಕೊಬ್ಬರಿಗೆ ಸಂಬಂಧಿಸಿದಂತೆ ತಿಪಟೂರಿನಲ್ಲಿ ಘೋಷಣೆಯಾದ ಟೆಂಡರ್ ಧಾರಣೆಯನ್ನೇ ಮೂಲಧಾರಣೆಯನ್ನಾಗಿ ರಾಜ್ಯಾದ್ಯಂತ ಪರಿಗಣಿಸಲಾಗುತ್ತದೆ.

    ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರಿತ್ಯದಿಂದಾಗಿ ಅಧಿಕ ಮಳೆಯಾಗಿ ಹಾಗೂ ಪ್ರಸ್ತುತ ಚಳಿಗಾಲ ಪ್ರಾರಂಭವಾಗಿರುವುದರಿಂದ ವಾತಾವರಣದಲ್ಲಿ ತೇವಾಂಶ ಹೆಚ್ಚಿ ನೈಸರ್ಗಿಕವಾಗಿ 9 ತಿಂಗಳಲ್ಲಿ ತಯಾರಾಗುವ ಒಣ ಉಂಡೆ ಕೊಬ್ಬರಿಯು 14-15 ತಿಂಗಳಾದರೂ ತಯಾರಾಗದೆ ಸಾಕಷ್ಟು ಪ್ರಮಾಣದಲ್ಲಿ ತೇವಾಂಶದಿಂದ ಕೂಡಿರುತ್ತದೆ. ತೆಂಗಿನಕಾಯಿಯನ್ನು ಕೊಬ್ಬರಿಯನ್ನಾಗಿಸಲು ಇನ್ನಷ್ಟು ದಿನ ಶೇಖರಣೆ ಮುಂದುವರಿಸಿದರೆ ಪ್ರಸ್ತುತ ಕಟಾವು ಮಾಡಿದ ತೆಂಗಿನಕಾಯಿಯನ್ನು ಶೇಖರಿಸಲು ರೈತರ ಬಳಿ ಸಾಕಷ್ಟು ಅಟ್ಟಗಳ ಲಭ್ಯತೆ ಇಲ್ಲ. ಇದರಿಂದಾಗಿ ರೈತರು ಈ ಹಿಂದೆ ಶೇಖರಿಸಿಟ್ಟ ಕೊಬ್ಬರಿಯ ತೇವಾಂಶ ಹೆಚ್ಚಿದ್ದರೂ ಮಾರುಕಟ್ಟೆಗೆ ತಂದು ಮಾರಾಟ ಮಾಡುವ ಅನಿವಾರ್ಯತೆ ಉಂಟಾಗಿದೆ ಎಂದು ಅವರು ಗಮನ ಸೆಳೆದಿದ್ದಾರೆ.

    2021 ನೇ ಸಾಲಿನಲ್ಲಿ ರಾಜ್ಯ ಸರ್ಕಾರದ ತೋಟಗಾರಿಕಾ ಇಲಾಖೆ ಉಂಡೆ ಕೊಬ್ಬರಿಗೆ ರೂ.16,730 ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಲು ಶಿಫಾರಸ್ಸು ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಈ ಶಿಫಾರಸನ್ನು ಗಣನೆಗೆ ತೆಗೆದುಕೊಳ್ಳದೆ ಅವೈಜ್ಞಾನಿಕವಾಗಿ ರೂ.11,000 ನಿಗದಿಪಡಿಸಿದೆ. ಈ ನಿಗದಿತ ಅವೈಜ್ಞಾನಿಕ ಬೆಲೆಗೆ ರೈತರ ಹಿತದೃಷ್ಟಿಯಿಂದ ಆಕ್ಷೇಪಿಸಬೇಕಾದ ರಾಜ್ಯ ಸರ್ಕಾರ ಆ ಕೆಲಸವನ್ನು ಮಾಡಿಲ್ಲ. ಇದು ರಾಜ್ಯ ಸರ್ಕಾರದ ರೈತ ವಿರೋಧಿ ನಡೆಯಾಗಿದೆ ಎಂದು ಟೂಡಾ ಶಶಿಧರ್ ದೂರಿದ್ದಾರೆ.

    ಉಂಡೆ ಕೊಬ್ಬರಿ ಈವರೆಗೂ ಮಾರುಕಟ್ಟೆಯಲ್ಲಿ ರೂ.17 ರಿಂದ 18 ಸಾವಿರ ಬೆಲೆಗೆ ಮಾರಾಟವಾಗುತ್ತಿತ್ತು. ಆದರೆ ಇದೀಗ ಮಾರುಕಟ್ಟೆಯಲ್ಲಿ ಕೊಬ್ಬರಿ ರೂ.11,500 ಮಾರಾಟವಾಗುತ್ತಿದ್ದು, ಇದರಿಂದ ರೈತರಿಗೆ ನಷ್ಟವಾಗುತ್ತಿದೆ.

    ಈ ಎಲ್ಲ ಅಂಶಗಳನ್ನು ಪರಿಗಣಿಸಿ ಅತಿವೃಷ್ಟಿಯಂತಹ ನೈಸರ್ಗಿಕ ವಿಕೋಪದಿಂದ ಗುಣಮಟ್ಟ ಕಳೆದುಕೊಂಡಿರುವ ಉಂಡೆಕೊಬ್ಬರಿಗೆ ಸರ್ಕಾರದಿಂದ ಪ್ರತಿ ಕ್ವಿಂಟಾಲ್ಗೆ ರೂ.3 ಸಾವಿರ ಪರಿಹಾರ ಮೊತ್ತವನ್ನು ಸಹಾಯಧನ ರೂಪದಲ್ಲಿ ಕೊಡಿಸಬೇಕು. ಇದರಿಂದ ಬೆಲೆ ಸಿಗದೆ ಕಂಗಾಲಾಗಿರುವ ರೈತರಿಗೆ ಕೊಂಚ ಮಟ್ಟಿಗಾದರೂ ಆಧಾರ ಸಿಗಲಿದೆ ಎಂದು ಟೂಡಾ ಶಶಿಧರ್ ಅವರು ಸಿದ್ದರಾಮಯ್ಯನವರಲ್ಲಿ ಮನವಿ ಮಾಡಿದ್ದಾರೆ.

    2013-14 ರಲ್ಲಿ ಕೊಬ್ಬರಿ ಬೆಲೆ ಕುಸಿತ ಕಂಡಾಗ ಅಂದಿನ ತಮ್ಮ ನೇತೃತ್ವದ ಸರ್ಕಾರ ಕೊಬ್ಬರಿ ಬೆಳೆಗಾರರ ಬೆನ್ನಿಗೆ ನಿಂತು ಒಂದು ಸಾವಿರ ರೂ. ಸಹಾಯಧನ ಘೋಷಿಸಿತ್ತು.

    ಕೇಂದ್ರ ಸರ್ಕಾರ ಹೊಸ ಮಾರುಕಟ್ಟೆ ಕಾಯ್ದೆ ಜಾರಿಗೆ ತಂದ ನಂತರ ಮಾರುಕಟ್ಟೆ ಪ್ರಾಂಗಣದಲ್ಲಿ ಉತ್ಪನ್ನ ಖರೀದಿಸುವ ವ್ಯಾಪಾರಸ್ಥರ ಸಂಖ್ಯೆ ತೀರ ಕ್ಷೀಣಿಸಿ ಮಾರುಕಟ್ಟೆಗೆ ಆವಕ ಕಡಿಮೆಯಾಗಿ ಮಾರುಕಟ್ಟೆಗಳು ನಶಿಸುತ್ತಿವೆ. ದೆಹಲಿಯ ರೈತ ಚಳವಳಿಯ ನಂತರ ಕೇಂದ್ರ ಸರ್ಕಾರ ಹೊಸ ಮಾರುಕಟ್ಟೆ ಕಾಯ್ದೆಯನ್ನು ಹಿಂಪಡೆದರೂ, ರಾಜ್ಯದ ಈಗಿನ ರೈತ ವಿರೋಧಿ ಸರ್ಕಾರ ಹಳೆ ಕಾಯ್ದೆಯನ್ನು ಮತ್ತೆ ಜಾರಿಗೆ ತರುವಲ್ಲಿ ವಿಫಲವಾಗಿದೆ. ಹೀಗಾಗಿ ರಾಜ್ಯದ ಸುಮಾರು 18 ಜಿಲ್ಲೆಗಳ ತೆಂಗು ಹಾಗೂ ಕೊಬ್ಬರಿ ಬೆಳೆಗಾರರ ಪರವಾಗಿ ಕಾಂಗ್ರೆಸ್ ಪಕ್ಷ ಬೆನ್ನೆಲುಬಾಗಿ ನಿಲ್ಲಬೇಕೆಂದು ಟೂಡಾ ಶಶಿಧರ್ ಅವರು ಸಿದ್ದರಾಮಯ್ಯನವರಿಗೆ ಮನವಿ ಮಾಡಿಕೊಡಿದ್ದಾರೆ.

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಔರಾದ್ (ಬೀದರ್): ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಯಾಗಿರುವ ‘ವಿಬಿ–ಜಿ ರಾಮ್…

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026

    ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ

    August 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.