ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.
ಹೊಸಪೇಟೆ ಹೊರವಲಯದಲ್ಲಿ ಈ ಘಟನೆ ನಡೆದಿದೆ.
ಯಶವಂತ , ಅಂಜಿನಿ, ಗುರುರಾಜ್ ಮೃತಪಟ್ಟ ವಿದ್ಯಾರ್ಥಿಗಳು. ಕಾಲುವೆಗೆ ಆರು ಮಂದಿ ವಿದ್ಯಾರ್ಥಿಗಳು ಈಜಲು ತೆರಳಿದ್ದರು. ಈ ವೇಳೆ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಹೊಸಪೇಟೆ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


