ಬೆಂಗಳೂರು: ಶ್ರೀನಿವಾಸ ಕಲ್ಯಾಣದ ಬಳಿಕ, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದರು. ಈ ಬೆನ್ನಲ್ಲೇ ರಾಮನಗರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಲಾಗಿದೆ.
ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ಶಾಸಕಿ ಅನಿತಾ ಕುಮಾರಸ್ವಾಮಿಯವರು, ರಾಮನಗರದ ಅಭ್ಯರ್ಥಿಯಾಗಿ ನಿಖಿಲ್ ಕಣಕ್ಕೆ ಇಳಿಯಲಿದ್ದಾರೆ. ನಮ್ಮ ಮಾವನವರಿಗೆ, ನನ್ನ ಪತಿ ಅವರಿಗೆ, ನನಗೆ ಕೊಟ್ಟ ಬೆಂಬಲವನ್ನು ನನ್ನ ಮಗನಿಗೂ ಕೊಡುವಂತೆ ಮನವಿ ಮಾಡಿದರು.ಇನ್ನೂ ಕೆಲವರು ಈ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಅದಕ್ಕೆಲ್ಲಾ ತೆರೆ ಎಳೆಯಬೇಕು ಎಂದು ಇವತ್ತು ನಿರ್ಧಾರ ಮಾಡಿದ್ದೇನೆ. ನಿಖಿಲ್ ಕುಮಾರಸ್ವಾಮಿ ರಾಮನಗರದಿಂದ ಕಣಕ್ಕೆ ಇಳಿಯುವುದಾಗಿ ಘೋಷಣೆ ಮಾಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy