ತಿಪಟೂರು: ಕೊಬ್ಬರಿಗೆ ಬೆಂಬಲ ಬೆಲೆ ಕುರಿತು ರಾಜ್ಯಸಭೆಯಲ್ಲಿ ಚರ್ಚಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮೇಲೆ ಒತ್ತಡ ತರುವಂತೆ ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಸಲ್ಲಿಸಲಾಯಿತು.
ಇತ್ತೀಚೆಗೆ ಕೊಬ್ಬರಿ ಬೆಲೆ ತುಂಬಾ ಕನಿಷ್ಠಕ್ಕೆ ಇಳಿದಿದ್ದು, ಪರಿಣಾಮವಾಗಿ ರೈತರಿಗೆ ತುಂಬಾ ನಷ್ಟ ಅನುಭವಿಸುವ ಸ್ಥಿತಿ ಉಂಟಾಗಿದೆ. ಆದ ಕಾರಣ ತಿಪಟೂರು ಕ್ಷೇತ್ರದ ಮಾಜಿ ಶಾಸಕ ಕೆ.ಷಡಕ್ಷರಿ ಅವರ ಆದೇಶದಂತೆ ನಾ ಕೆನಹಳ್ಳಿ ಸುರೇಶ್ ಷಡಕ್ಷರಿ ಅವರ ಅಭಿಮಾನಿ ಬಳಗ ಮಲ್ಲಿಕಾರ್ಜುನ ಖರ್ಗೆ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಕಲ್ಪತರು ನಾಡಿನ ಕೊಬ್ಬರಿಗೆ ಕನಿಷ್ಠ ರೂ.15,000 ಬೆಂಬಲ ಬೆಲೆ ಘೋಷಿಸುವಂತೆ ನ್ಯಾಫೆಡ್ ಕೇಂದ್ರ ಸ್ಥಾಪಿಸುವಂತೆ ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ವರದಿ: ಆನಂದ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz