nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026
    Facebook Twitter Instagram
    ಟ್ರೆಂಡಿಂಗ್
    • ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    • ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
    • ಆ.29: ಪಾವಗಡದಲ್ಲಿ ಉದ್ಯೋಗ ಮೇಳ
    • ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
    • ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ
    • ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!
    • ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ
    • ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿಸೆಂಬರ್ 31ರ ಒಳಗೆ ಟಿಕೆಟ್ ಫೈನಲ್ : ಡಿ.ಕೆ ಶಿವಕುಮಾರ್
    ರಾಜ್ಯ ಸುದ್ದಿ December 19, 2022

    ಡಿಸೆಂಬರ್ 31ರ ಒಳಗೆ ಟಿಕೆಟ್ ಫೈನಲ್ : ಡಿ.ಕೆ ಶಿವಕುಮಾರ್

    By adminDecember 19, 2022No Comments2 Mins Read
    dk shivkumar

    ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮುನ್ನ ಪಕ್ಷದ ಆಧಾರ ಸ್ಥಂಭವಾಗಿರುವ ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಹಾಗೂ ವಿವಿಧ ಘಟಕಗಳ ಮುಖಂಡರ ಜೊತೆ ಚರ್ಚೆ ಮಾಡಿ ಅವರ ಅಭಿಪ್ರಾಯ ಪಡೆಯಲಾಗುವುದು. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಧ್ವನಿ ಪಕ್ಷದ ಧ್ವನಿಯಾಗಬೇಕು ಎಂಬುದು ಈ ಸಮಿತಿಯ ತೀರ್ಮಾನವಾಗಿದೆ  ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

    ಇದುವರೆಗೂ ಬಂದಿರುವ ಅರ್ಜಿಗಳನ್ನು ಆಯಾ ಜಿಲ್ಲಾ ಕಾಂಗ್ರೆಸ್ ಗಳಿಗೆ ಕಳುಹಿಸಿಕೊಡುತ್ತೇವೆ. ಜಿಲ್ಲಾ ಕೇಂದ್ರಗಳಲ್ಲಿ ಪ್ರತಿ ಬ್ಲಾಕ್ ಮಟ್ಟದ ನಾಯಕರನ್ನು ಕರೆಸಿ ಚರ್ಚೆ ಮಾಡಲಾಗುವುದು. ರಾಜ್ಯಮಟ್ಟದ ಚುನಾವಣಾ ಸಮಿತಿಯಿಂದ ಇಬ್ಬರು ಸದಸ್ಯರಿಗೆ ಒಂದೊಂದು ಜಿಲ್ಲೆಯ ಜವಾಬ್ದಾರಿಯನ್ನು ನೀಡಲಾಗುವುದು ಎಂದು ಅವರು ತಿಳಿಸಿದರು.

    ಪಕ್ಷದ 5 ಕಾರ್ಯಾಧ್ಯಕ್ಷರು ಹಾಗೂ ಎಐಸಿಸಿ ಕಾರ್ಯದರ್ಶಿಗಳು, ಚುನಾವಣಾ ಸಮಿತಿ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸದಸ್ಯರು, ಪಕ್ಷದ ಪದಾಧಿಕಾರಿಗಳು ಎಲ್ಲರೂ ಸೇರಿ ಚರ್ಚೆ ಮಾಡುತ್ತಾರೆ. ಆದಷ್ಟು ಎಲ್ಲಾ ಕ್ಷೇತ್ರಗಳಲ್ಲಿ ಎಲ್ಲಾ ಟಿಕೆಟ್ ಆಕಾಂಕ್ಷಿಗಳನ್ನು ಸೇರಿಸಿ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

    ಪ್ರತಿ ಕ್ಷೇತ್ರಗಳಲ್ಲಿ 1 ರಿಂದ 3 ಆಕಾಂಕ್ಷಿಗಳ ಹೆಸರನ್ನು ಪರಿಷ್ಕರಿಸಿ ಕೆಪಿಸಿಸಿಗೆ ಕಳುಹಿಸುವಂತೆ ನಾವು ಸೂಚನೆ ನೀಡಿದ್ದೇವೆ. ಒತ್ತಡ ಹೆಚ್ಚಾಗಿದ್ದ ಸಂದರ್ಭದಲ್ಲಿ ಅಂತಹ ಕ್ಷೇತ್ರಗಳ ವಿಚಾರವನ್ನು ರಾಜ್ಯಮಟ್ಟದಲ್ಲಿ ನಾವು ಕೂತು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

    ಪಕ್ಷದ ಕಾರ್ಯಕರ್ತರು ನಮ್ಮ ಆಧಾರ ಸ್ಥಂಭವಾಗಿದ್ದು, ಅವರ ಅಭಿಪ್ರಾಯ ಪಡೆದುಕೊಂಡು ಡಿಸೆಂಬರ್ 31ರ ಒಳಗಾಗಿ ಈ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಬೇಕು. ಜನವರಿ 1ರ ಒಳಗಾಗಿ ಎಲ್ಲಾ ಜಿಲ್ಲೆಗಳಿಂದ ಆಯಾ ಜಿಲ್ಲೆಗಳ ಕ್ಷೇತ್ರದ ಪರಿಷ್ಕೃತ ಅರ್ಜಿಗಳ ಪಟ್ಟಿಯನ್ನು ನೀಡಬೇಕು. ನಂತರ ರಾಜ್ಯ ಮಟ್ಟದ ಚುನಾವಣಾ ಸಮಿತಿಯು ಮತ್ತೆ ಸಭೆ ಸೇರಿ ಎಲ್ಲ ಮಾನದಂಡಗಳನ್ನು ಅನುಸರಿಸಿ ಮುಂದಿನ ಪ್ರಕ್ರಿಯೆಯನ್ನು ನಡೆಸಲಿದೆ.ಉಳಿದಂತೆ ನಮ್ಮ ರಾಜ್ಯ ಪ್ರವಾಸದ ಕುರಿತು ನಾಳೆ ಮಾಹಿತಿ ನೀಡಲಾಗುವುದು ಎಂದು ಅವರು ಹೇಳಿದರು.

    ನಿಮ್ಮ ಪಕ್ಷದ ಬೇರೆ ನಾಯಕರು ಕೆಲವು ಕಡೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಘೋಷಿಸುತ್ತಿದ್ದಾರೆ ಎಂದು ಕೇಳಿದಾಗ, ‘ ಪಕ್ಷದ ಅಭ್ಯರ್ಥಿಗಳನ್ನು ಯಾರೂ ಘೋಷಿಸುವಂತಿಲ್ಲ. ಯಾರಾದರೂ ಪಕ್ಷದ ಇತಿಮಿತಿಯನ್ನು ಮೀರಿದರೆ ಅಂತಹವರಿಗೆ ನೋಟಿಸ್ ನೀಡಲಾಗುವುದು’ ಎಂದು ಸ್ಪಷ್ಟಪಡಿಸಿದರು.

    ಅರ್ಜಿ ಹಾಕಿರುವವರ ಜೊತೆಗೆ ಅರ್ಜಿ ಹಾಕದವರ ಹೆಸರನ್ನು ಪರಿಗಣಿಸುತ್ತೀರಾ ಎಂಬ ಪ್ರಶ್ನೆಗೆ, ‘ ಸದ್ಯಕ್ಕೆ ನಾವು ಯಾರೆಲ್ಲ ಅರ್ಜಿ ಹಾಕಿದ್ದಾರೆ ಅವರ ಹೆಸರುಗಳನ್ನು ಮಾತ್ರ ಪರಿಗಣಿಸುತಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಅಭ್ಯರ್ಥಿ ಸಿಕ್ಕಿದರೆ ಅವರನ್ನು ಕಣಕ್ಕಿಳಿಸುವ ಅವಕಾಶವನ್ನು ಇಟ್ಟುಕೊಂಡಿರುತ್ತೇವೆ ‘ ಎಂದು ತಿಳಿಸಿದರು.

    ಸಂಕ್ರಾಂತಿ ಒಳಗಾಗಿ ಪಕ್ಷದ ಅಭ್ಯರ್ಥಿ ಪ್ರಕಟ ಮಾಡಲಾಗುವುದೇ ಎಂದು ಕೇಳಿದ ಪ್ರಶ್ನೆಗೆ, ‘ ಈ ತಿಂಗಳು 31ರ ಒಳಗಾಗಿ ಈ ಪ್ರಕ್ರಿಯೆ ಮುಕ್ತಾಯಗೊಳಿಸಿ ಜನವರಿ ಒಂದರ ಒಳಗಾಗಿ ಪರಿಷ್ಕೃತ ಪಟ್ಟಿಯನ್ನು ನೀಡಬೇಕು ಎಂದು ಸೂಚಿಸಿದ್ದೇವೆ. ಜನವರಿ 5ರಂದು ರಾಜ್ಯಮಟ್ಟದ ಚುನಾವಣೆ ಸಮಿತಿಯು ಮತ್ತೆ ಸಭೆ ನಡೆಸಬೇಕು, ಆದಷ್ಟು ಬೇಗ ಜನ ಜನವರಿ 15ರ ಒಳಗಾಗಿ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನಾವು ಪ್ರಯತ್ನ ಮಾಡುತಿದ್ದೇವೆ ಎಂದು ಹೇಳಿದರು.

    ಸಾವರ್ಕರ್ ಅವರ ಭಾವಚಿತ್ರ ಅನಾವರಣ ಕುರಿತು ಕೇಳಿದ ಪ್ರಶ್ನೆಗೆ, ‘ ಈ ಕುರಿತಾಗಿ ನಮಗೆ ಯಾವುದೇ ಮಾಹಿತಿ ಇಲ್ಲ. ನಾವು ಮಹಾತ್ಮ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರವನ್ನು ಹಾಕುತ್ತಿದ್ದೇವೆ ಈ ಕಾರ್ಯಕ್ರಮಕ್ಕೆ ನೀವು ಆಗಮಿಸಬೇಕು ಎಂದು ಸ್ಪೀಕರ್ ಅವರ ಕಚೇರಿಯಿಂದ ನಮಗೆ ಆಹ್ವಾನ ಬಂದಿದೆ. ಇತರ ವಿಚಾರದ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಈ ವಿಚಾರದ ಕುರಿತು ನಮಗೆ ಗೊತ್ತಿಲ್ಲದ ಕಾರಣ ನಾವು ಮಾತನಾಡುವುದಿಲ್ಲ. ಈ ವಿಚಾರವಾಗಿ ನಿಮ್ಮಿಂದ ಈಗ ಮಾಹಿತಿ ಸಿಕ್ಕಿದೆ ಈ ಕುರಿತು ಈಗ ಚರ್ಚೆ ಮಾಡಿ ತೀರ್ಮಾನಕ್ಕೆ ಬರುತ್ತೇವೆ ‘ ಎಂದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!

    August 13, 2026

    ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!

    August 13, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ಮಧುಗಿರಿ: ತಾಲೂಕಿನ ರೈತರು, ಕೂಲಿ ಕಾರ್ಮಿಕರು ಬರಗಾಲ ಬರುತ್ತದೆ ಎಂದು ಭಯ ಪಡುವ ಅಗತ್ಯವಿಲ್ಲ, ನಮ್ಮ ಕಾಂಗ್ರೆಸ್ ಸರ್ಕಾರ ಹಾಗೂ…

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.