ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಖಂಡನೆ ವ್ಯಕ್ತಪಡಿಸಿದ್ದಾರೆ.ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ಕೇಂದ್ರ ಸರ್ಕಾರದಿಂದ ತನಿಖಾ ಸಂಸ್ಥೆಗಳ ದುರ್ಬಳಕೆಯಾಗುತ್ತಿದೆ.
ಅನೈತಿಕ ಮಾರ್ಗದಲ್ಲಿ ಬೊಮ್ಮಾಯಿ ಸರ್ಕಾರ ಬಂದಿದೆ. ರಾಜ್ಯದಲ್ಲಿ ಸಾಕಷ್ಟು ಭ್ರಷ್ಟಾಚಾರ, ನೇಮಕಾತಿ ಹಗರಣಗಳು ನಡೆದಿದೆ. ಆದರೆ ಈ ಬಗ್ಗೆ ಕ್ರಮ ಇಲ್ಲ. ಜನರು ರೈತರ ಸಮಸ್ಯೆ ನಿವಾರಿಸುವಲ್ಲಿ ಸರಕಾರ ವಿಫಲವಾಗಿದೆ ಎಂದು ಕಿಡಿಕಾರಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


