ಚೀನಾ ಸೇರಿ ಹಲವು ದೇಶಗಳಲ್ಲಿ ಮಹಾಮಾರಿ ಕೊರೋನಾ ಉಲ್ಪಣವಾಗುತ್ತಿದ್ದು ಭಾರತಕ್ಕೂ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಮುಂದಾಗಿದೆ.
ಇಂದು ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಹಿರಿಯ ಅಧಿಕಾರಿಗಳು ತಜ್ಞರು ಪಾಲ್ಗೊಳ್ಳಲಿದ್ದಾರೆ. ದೇಶದಲ್ಲಿ ಕೋವಿಡ್ ಪರಿಸ್ಥಿತಿ ಬಗ್ಗೆ ಪ್ರಧಾನಿ ಮೋದಿ ಅವರು ಅಧಿಕಾರಿಗಳು ಮತ್ತು ತಜ್ಞರ ಜೊತೆ ಸಮಾಲೋಚನೆ ನಡೆಸಲಿದ್ದಾರೆ.
ಈಗಾಗಲೇ ಕೋವಿಡ್ ತಡೆಗಾಗಿ ಕಟ್ಟಚ್ಚರ ವಹಿಸಿದ್ದು ಚೀನಾದಿಂದ ಬರುವ ಪ್ರವಾಸಿಗರ ಮೇಲೆ ನಿಗಾವಹಿಸಲಾಗುತ್ತಿದೆ. ಚೀನಾ ಸೇರಿದಂತೆ ಇತರ ದೇಶಗಳಿಂದ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಮತ್ತೆ ಕೋವಿಡ್ ಪರೀಕ್ಷೆಗೆ ಕೇಂದ್ರ ಆರೋಗ್ಯ ಇಲಾಖೆ ಆದೇಶ ನೀಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy