ರೈಲ್ವೇ ಪೊಲೀಸ್ ಪೇದೆಯೊಬ್ಬರು ಗುಂಡು ಹಾರಿಸಿ 60 ವರ್ಷದ ವ್ಯಕ್ತಿಯೊಬ್ಬರನ್ನು ಹತ್ಯೆ ನಡೆಸಿದ ಘಟನೆ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದಿದ್ದು, ರೈಲಿನೊಳಗೆ ನಡೆದ ಜಗಳ ಕೊಲೆಗೆ ಕಾರಣವಾಗಿದೆ.
ಮುನ್ನಾ ಲಾಲ್ ಹತ್ಯೆಗೀಡಾದವರಾಗಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ವಾಗ್ವಾದದ ನಂತರ ಕಾನ್ಸ್‌ಟೇಬಲ್ ಅಮಿತ್ ಸಿಂಗ್ ಲಾಲ್ ಅವರ ಕಾಲಿಗೆ ಗುಂಡು ಹಾರಿಸಲಾಗಿದೆ. ಗಾಯಗೊಂಡ ಲಾಲ್ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿದ್ದಾರೆ.
ರೈಲು ದುಧ್ವಾ ರೈಲು ನಿಲ್ದಾಣವನ್ನು ತಲುಪಿದಾಗ ಲಾಲ್ ತನ್ನ ಮೇಲೆ ದಾಳಿ ಮಾಡಿ, ತನ್ನ ಸರ್ವಿಸ್ ಪಿಸ್ತೂಲ್ ಕಸಿದುಕೊಳ್ಳಲು ಪ್ರಯತ್ನಿಸಿದ್ದು, ಈ ವೇಳೆ ತಾನು ಆತನ ಕಾಲಿಗೆ ಗುಂಡು ಹಾರಿಸಿರುವುದಾಗಿ ಪೇದೆ ಹೇಳಿಕೊಂಡಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆ ಸಂಬಂಧ ಎಫ್ ಐಆರ್ ದಾಖಲಾಗಿದ್ದು, ಕಾನ್ ಸ್ಟೇಬಲ್ ನನ್ನು ಬಂಧಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy