ಸುರತ್ಕಲ್: ಇತ್ತೀಚೆಗಷ್ಟೇ ಸುರತ್ಕಲ್ ನಲ್ಲಿ ಫಾಝಿಲ್ ಹತ್ಯೆ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಇದೀಗ ಇದೇ ಸುರತ್ಕಲ್ ನಲ್ಲಿ ವ್ಯಕ್ತಿಯೊಬ್ಬರನ್ನು ಇರಿದು ಬರ್ಬರವಾಗಿ ಹತ್ಯೆ ನಡೆಸಲಾಗಿದೆ.
ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ 4ನೆ ಬ್ಲಾಕ್ ನೈತಂಗಡಿ ಬಳಿ ಈ ಘಟನೆ ನಡೆದಿದ್ದು, ಇಬ್ಬರು ದುಷ್ಕರ್ಮಿಗಳ ತಂಡವೊಂದು ಜಲೀಲ್ ಎಂಬ ವ್ಯಕ್ತಿಗೆ ಇರಿದು ಪರಾರಿಯಾಗಿದೆ.
ಜಲೀಲ್ ಅವರು, ಅಂಗಡಿಯಲ್ಲಿದ್ದ ವೇಳೆ ಅವರ ಎದೆಯ ಭಾಗಕ್ಕೆ ಚೂರಿ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz