nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026
    Facebook Twitter Instagram
    ಟ್ರೆಂಡಿಂಗ್
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    • ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    • ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಲ್ಯಾಣ ಕರ್ನಾಟಕ ಭಾಗದ ರೈತರಿಗೆ ಬಿಜೆಪಿಯಿಂದ ಅನ್ಯಾಯ: ಪ್ರಿಯಾಂಕ್ ಖರ್ಗೆ
    ರಾಜ್ಯ ಸುದ್ದಿ December 27, 2022

    ಕಲ್ಯಾಣ ಕರ್ನಾಟಕ ಭಾಗದ ರೈತರಿಗೆ ಬಿಜೆಪಿಯಿಂದ ಅನ್ಯಾಯ: ಪ್ರಿಯಾಂಕ್ ಖರ್ಗೆ

    By adminDecember 27, 2022No Comments2 Mins Read
    priyank kharge

    ಕಲ್ಯಾಣ ಕರ್ನಾಟಕ ಭಾಗದಲ್ಲಿ, ತೊಗರಿ ಬೆಳೆ ನೆಟೆರೋಗದಿಂದ ಸಂಪೂರ್ಣವಾಗಿ ನಾಶವಾಗಿದ್ದು ರೈತರು ಕಂಗಾಲಾಗಿದ್ದಾರೆ. ಆದರೆ ಬಿಜೆಪಿ ಸರ್ಕಾರ ಮಾತ್ರ ಯಾವುದೇ ಸಮೀಕ್ಷೆಯನ್ನು ನಡೆಸದೆ, ಪರಿಹಾರವನ್ನು ನೀಡದೆ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

    ಸರ್ಕಾರ ನೆಟೆರೋಗದಿಂದ ಹಾನಿಗೊಳಗಾದ ತೊಗರಿ ಬೆಳೆಗಾರರಿಗೆ 500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸುವ ಮೂಲಕ ಪ್ರತಿ ಎಕರೆ ಪ್ರದೇಶಕ್ಕೆ 25,000 ನಷ್ಟ ಪರಿಹಾರ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದೇನೆ ಎಂದು ಅವರು ತಿಳಿಸಿದ್ದಾರೆ.


    Provided by
    Provided by

    ಇಡೀ ಏಷ್ಯಾ ಖಂಡದಲ್ಲೇ ಕಲಬುರಗಿ ಜಿಲ್ಲೆಯಲ್ಲಿ ತೊಗರಿ ಬೆಳೆಯನ್ನು ಹೆಚ್ಚಾಗಿ ಬೆಳೆಯುತ್ತಿರುವುದರಿಂದ ಈ ಜಿಲ್ಲೆಗೆ ತೊಗರಿಯ ಕಣಜ ಎಂದೇ ಕರೆಯಲಾಗುತ್ತಿದೆ. ಈ ಭಾಗದ ರೈತರ ಪ್ರಮುಖ ಬೆಳೆಯಾದ ತೊಗರಿ ಇಲ್ಲಿನ ಜಮೀನಿಗಳಲ್ಲಿ ಹೆಚ್ಚಾಗಿ ಬಿತ್ತನೆ ಮಾಡಲಾಗುತ್ತಿದ್ದು, ಕಲಬುರಗಿ ಜಿಲ್ಲೆಯ ತೊಗರಿ ದೇಶದ ನಾನಾ ಭಾಗಗಳಿಗೆ ರವಾನೆ ಮಾಡಲಾಗುತ್ತಿದೆ. ಆದರೆ ಇತ್ತೀಚೆಗೆ ಎರಡು ವರ್ಷಗಳಿಂದ ಮಳೆ ಹೆಚ್ಚಿನ ಪ್ರಮಾಣದಲ್ಲಿ ಬೀಳುತ್ತಿರುವುದರಿಂದಾಗಿ ನಿರೀಕ್ಷಿತ ಪ್ರಮಾಣದಲ್ಲಿ ತೊಗರಿ ಫಸಲು ಬರುತ್ತಿಲ್ಲ ಎನ್ನುವುದು ಈ ಭಾಗದ ರೈತರ ಅಳಲಾಗಿದೆ.

    ಈ ನಡುವೆ 2022-23 ರ ಸಾಲಿನಲ್ಲಿ 5.50 ಲಕ್ಷ ಹೆಕ್ಟೇ‌ರ್ ಪ್ರದೇಶದಲ್ಲಿ, ತೊಗರಿ ಬಿತ್ತನೆ ಗುರಿ ಹೊಂದಲಾಗಿತ್ತು. ಅದರಲ್ಲಿ 4.78 ಲಕ್ಷ ಹೆಕ್ಟೇರ್ ಬಿತ್ತನೆ ಮಾಡಲಾಗಿದೆ. ಆದರೆ, ಜಿಲ್ಲೆಯಲ್ಲಿ ಸುರಿದ ಅನಿಯಮಿತ ಮಳೆಯಿಂದಾಗಿ ಸುಮಾರು 1.30 ಲಕ್ಷ ಹೆಕ್ಟೇರ್ ಬಿತ್ತನೆ ಪ್ರದೇಶ ಸಂಪೂರ್ಣ ಹಾಳಾಗಿದೆ. ಎಡೆಬಿಡದೆ ಸುರಿದ ಮಳೆಯ ಪರಿಣಾಮ ಅತಿವೃಷ್ಟಿ ಸೃಷ್ಟಿಯಾಗಿ ತೊಗರಿ ಗಿಡಗಳು ಒಣಗ ತೊಡಗಿದ್ದು, ಆದರೂ ಕೂಡಾ ಅಷ್ಟೋ ಇಷ್ಟೋ ಫಸಲಿನ ನಿರೀಕ್ಷೆಯಲ್ಲಿದ್ದ ರೈತರು ಇದೀಗ ತೊಗರಿ ಬೆಳೆಗೆ ನೆಟೆ ರೋಗ ಕಾಣಿಸಿಕೊಂಡ ನಂತರ ತೀವ್ರ ಕಂಗಾಲಾಗಿದ್ದಾರೆ ಎಂದು ತಿಳಿಸಿದ್ದಾರೆ.

    ತೊಗರಿ ಬೆಳೆಯ ಅದ್ಭುತ ಫಸಲಿನ ಕನಸು ಕಂಡಿದ್ದ ರೈತರಿಗೆ ಮೊದಲು ಅತಿವೃಷ್ಟಿ ಹೊಡೆತ ಕೊಟ್ಟರೆ, ಈಗ ನೆಟೆರೋಗ, ಭಾರೀ ಹೊಡೆತ ಕೊಟ್ಟಿದ್ದು ರೈತಾಪಿವರ್ಗ ತೀವ್ರ ಸಂಕಷ್ಟಕ್ಕೆ ಗುರಿಯಾಗಿದೆ. ಒಂದು ಅಂದಾಜಿನ ಪ್ರಕಾರ ಬಿತ್ತನೆಯಾದ 4,78 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 1.30 ಲಕ್ಷ ಹೆಕ್ಟೇರ್, ಅತಿವೃಷ್ಟಿಯಿಂದ ಹಾಳಾದರೆ, ಉಳಿದುದರಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಹೆಕ್ಟೇರ್ ಪ್ರದೇಶ ನೆಟೆರೋಗದಿಂದ ಸಂಪೂರ್ಣ ಹಾಳಾಗಿದೆ. ಅಲ್ಲಿಗೆ ಅತಿವೃಷ್ಟಿ ಹಾಗೂ ನೆಟೆ ರೋಗದಿಂದ ಹಾಳಾದ ಬೆಳೆಯ ಪ್ರಮಾಣ ಶೇ 80% ರಿಂದ 90% ಅಂದಾಜಿಸಲಾಗಿದೆ. ಈ ನಷ್ಟವನ್ನು ಅಳಿದುಳಿದ ಬೆಳೆಯಿಂದ ತುಂಬಿಸಿಕೊಳ್ಳುವುದು ಹೇಗೆ ಎನ್ನುವ ಚಿಂತೆ ರೈತರನ್ನು ಮತ್ತಷ್ಟು ಹೈರಾಣಾಗಿಸಿದೆ ಎಂದಿದ್ದಾರೆ.

    ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಬೆಳೆಗಳು ಹಾನಿಯಾದಾಗ ವಿಶೇಷ ಪ್ಯಾಕೇಜ್ ನೀಡುವಂತೆ, ಈಗ ನೆಟೆ ರೋಗದಿಂದ ಹಾನಿಗೊಳಗಾದ ರಾಜ್ಯದ ತೊಗರಿ ಬೆಳೆಗಾರರಿಗೆ 500 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ರೈತರ ನೋವಿಗೆ ಸ್ಪಂದಿಸಿ ಜೊತೆಗೆ ಪ್ರತಿ ಎಕರೆ ಪ್ರದೇಶಕ್ಕೆ 25,000 ನಷ್ಟ ಪರಿಹಾರ ಬಿಡುಗಡೆ ಮಾಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರವಾಗಿರುವ ಬೆನ್ನಲ್ಲೇ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು…

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.