ಜಮ್ಮು: ಭಾರತೀಯ ಸೇನಾಪಡೆ ಮೂವರು ಉಗ್ರರನ್ನು ಎನ್ ಕೌಂಟರ್ ಮಾಡಿದ ಘಟನೆ ಜಮ್ಮುವಿನ ಸಿದ್ರಾ ಪ್ರದೇಶದಲ್ಲಿ ಬುಧವಾರ ನಡೆದಿದೆ.
ಲಾರಿಯ ಸಂಚಾರವೊಂದು ಅನುಮಾನಾಸ್ಪದವಾಗಿ ಕಂಡು ಬಂದಿತ್ತು. ಕೂಡಲೇ ಲಾರಿಯನ್ನು ಹಿಂಬಾಲಿಸಲಾಗಿತ್ತು. ಜಮ್ಮುವಿನ ಸಿಧ್ರಾ ಪ್ರದೇಶದಲ್ಲಿ ಲಾರಿ ನಿಂತಿತು. ಲಾರಿ ನಿಂತ ಕೂಡಲೇ ಚಾಲಕ ಪರಾರಿಯಾದ. ಲಾರಿಯನ್ನು ಪರಿಶೀಲಿಸಿದಾಗ ಉಗ್ರರು ಅಡಗಿ ಕುಳಿತಿರುವುದು ಕಂಡು ಬಂದಿತ್ತು. ಕೂಡಲೇ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು ಎಂದು ಎಜಿಡಿಪಿ ಮುಕೇಶ್ ಸಿಂಗ್ ಮಾಹಿತಿ ನೀಡಿದ್ದಾರೆ.
ಉಗ್ರರ ಬಳಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳಿದ್ದವು. ಉಗ್ರರು ದಾಳಿ ನಡೆಸಲು ಆರಂಭಿಸುತ್ತಿದ್ದಂತೆಯೇ ಸ್ಥಳವನ್ನು ಸುತ್ತುವರೆದು ಉಗ್ರರ ದಾಳಿಗೆ ದಿಟ್ಟ ಉತ್ತರ ನೀಡಲಾಯಿತು. ಈ ವೇಳೆ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


