nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026
    Facebook Twitter Instagram
    ಟ್ರೆಂಡಿಂಗ್
    • ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    • ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
    • ಆ.29: ಪಾವಗಡದಲ್ಲಿ ಉದ್ಯೋಗ ಮೇಳ
    • ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
    • ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ
    • ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!
    • ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ
    • ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾವೇರಿ, ಉಡುಪಿ ಹಾಗೂ ರಾಯಚೂರಿನಲ್ಲಿ ಜವಳಿ ಪಾರ್ಕ್ ಉದ್ಯಮಕ್ಕೆ ಸರ್ಕಾರದ ಅನುಮತಿ
    ರಾಜ್ಯ ಸುದ್ದಿ December 28, 2022

    ಹಾವೇರಿ, ಉಡುಪಿ ಹಾಗೂ ರಾಯಚೂರಿನಲ್ಲಿ ಜವಳಿ ಪಾರ್ಕ್ ಉದ್ಯಮಕ್ಕೆ ಸರ್ಕಾರದ ಅನುಮತಿ

    By adminDecember 28, 2022No Comments2 Mins Read
    javalli

    ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಯಡಿ ರಾಜ್ಯದ 6 ಕಡೆ ಜವಳಿ ಪಾರ್ಕ್ ಈಗಾಗಲೇ ನಿರ್ಮಿಸಲಾಗಿದೆ. ಹಾವೇರಿ, ಉಡುಪಿ ಹಾಗೂ ರಾಯಚೂರಿನಲ್ಲೂ ಸಹ ಜವಳಿ ಪಾರ್ಕ್ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಹೇಳಿದರು.

    ಮಂಗಳವಾರ ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರಾದ ಕೆ.ಎಸ್.ನವೀನ್ ಹಾಗೂ ಚನ್ನರಾಜ್ ಬಸವರಾಜ್ ಹಟ್ಟಿಹೊಳಿ ಅವರ ಚುಕ್ಕೆ ಗುರುತಿನ ಪ್ರಶ್ನೆಗಳಿಗೆ ಸಚಿವರು ಉತ್ತರಿಸಿದರು.ರಾಜ್ಯ ಸರ್ಕಾರ 2019ರಲ್ಲಿ ನೂತನ ಜವಳಿ ಹಾಗೂ ಸಿದ್ಧಉಡುಪು ನೀತಿಯನ್ನು ಜಾರಿಗೊಳಿಸಿದೆ. ಇದರ ಅನ್ವಯ ಪ್ರತ್ಯೇಕ ಉದ್ಯಮಿ ಅಥವಾ ಎಸ್.ಪಿ.ವಿಗಳು 15 ಎಕರೆ ಜಾಗ ಹೊಂದಿ ಜವಳಿ ಪಾರ್ಕ್ ಸ್ಥಾಪಿಸಲು ಮುಂದಾದರೆ ಸರ್ಕಾರದಿಂದ ಸಹಾಯ ನೀಡಲಾಗುವುದು ಎಂದರು.

    ಶಾಸಕ ಕೆ.ಎಸ್. ನವೀನ್ ಮಾತನಾಡಿ ಜಾಗತಿಕವಾಗಿ ಪಾಕಿಸ್ತಾನ ಹಾಗೂ ಚೈನಾ ಬಂಡವಾಳ ಹೂಡಿಕೆದಾರರ ವಿಶ್ವಾಸ ಕಳೆದುಕೊಂಡಿವೆ. ಮುಂದಿನ ದಿನಗಳಲ್ಲಿ ಭಾರತ ಸಿದ್ಧ ಉಡುಪು ತಯಾರಿಕೆ ಕೇಂದ್ರವಾಗಿ ಜಗತ್ತಿಗೆ ಹೊರಹೊಮ್ಮಲಿದೆ. ರಾಜ್ಯ ಸರ್ಕಾರ ಇದಕ್ಕೆ ಸಿದ್ದವಾಗಿದ್ದು, ರಾಜ್ಯದಲ್ಲಿ ಜವಳಿ ಉದ್ಯಮಕ್ಕೆ ಬೆಂಬಲ ನೀಡಬೇಕು.ಬೆಂಗಳೂರಿನಲ್ಲಿ ಹೆಚ್ಚಿನ ಗಾರ್ಮೆಂಟ್ಸ್ ಕಾರ್ಖಾನೆಗಳು ನೆಲೆಗೊಂಡಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಗಾರ್ಮೆಂಟ್ಸ್ ಉದ್ಯೋಗ ಅರಿಸಿ ಲಕ್ಷಾಂತರ ಜನ ವಲಸೆ ಹೋಗುತ್ತಿದ್ದಾರೆ.

    ಇದನ್ನು ತಪ್ಪಿಸಲು ಸರ್ಕಾರ ಪ್ರತಿ ತಾಲೂಕು ಹಂತಲ್ಲಿಯೂ ಗಾರ್ಮೆಂಟ್ಸ್ ತೆರೆಯಲು ನೆರವು ನೀಡಬೇಕು. ಜವಳಿ ಪಾರ್ಕ್ ಸ್ಥಾಪನೆಯ ಉದ್ದೇಶದಿಂದ ಸರ್ಕಾರದ ನೆರವು ಪಡೆದುಕೊಂಡು ಖಾಸಗಿ ವ್ಯಕ್ತಿಗಳು ಉದ್ದಿಮೆ ಸ್ಥಾಪಿಸದೆ ರಿಯಲ್ ಎಸ್ಟೇಟ್ ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತಿದಾರೆ. ಇವರಿಗೆ ಕಡಿವಾಣ ಹಾಕಬೇಕು ಎಂದು ಸಚಿವರಲ್ಲಿ ಕೋರಿಕೊಂಡರು.ಜವಳಿ ಪಾರ್ಕ್ ಹೆಸರಿನಲ್ಲಿ ರಿಯಲ್ ಎಸ್ಟೇಟ್ ನಡೆಸುತ್ತಿರುವ ಹಾಗೂ ಉದ್ಯೋಗ ನೀಡದಿರುವ ಉದ್ದಿಮೆದಾರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಸಚಿವ ಶಂಕರ್ ಪಾಟೀಲ್ ಮುನೇನಕೋಪ್ಪ ಭರವಸೆ ನೀಡಿದರು.

    ಕೋವಿಡ್ ಮೃತ ಪಟ್ಟ ನೇಕಾರರರ ಕುಟುಂಬದವರಿಗೆ ರೂ.2 ಲಕ್ಷ ಪರಿಹಾರ:

    ಸರ್ಕಾರ ಕೋವಿಡ್‍ನಲ್ಲಿ ಮೃತಪಟ್ಟ ನೇಕಾರರ ಕುಟುಂಬದವರ ನೆರವಿಗೆ ನಿಂತಿದೆ. ಮೃತರ ಪರಿಹಾರ್ಥವಾಗಿ ರೂ.2 ಲಕ್ಷವನ್ನು ಅವಲಂಬಿತರ ಖಾತೆ ಜಮೆ ಮಾಡಲಾಗಿದೆ ಎಂದು ಸಚಿವ ಶಂಕರ್ ಪಾಟೀಲ್ ಮುನೇನಕೋಪ್ಪ ಹೇಳಿದರು.2019-20 ನೇ ಸಾಲಿನ 4ನೇ ರಾಷ್ಟ್ರೀಯ ಗಣತಿಯ ಅನುಸಾರ ರಾಜ್ಯದಲ್ಲಿ 54250 ಕೈಮಗ್ಗ ನೇಕಾರರು ಇದ್ದಾರೆ. ರಾಜ್ಯ ಸರ್ಕಾರ ಕೈಗೊಂಡ ವಿದ್ಯುತ್ ಮಗ್ಗ ನೇಕಾರರ ಗಣತಿಯಲ್ಲಿ ಡಿ.16 ಅಂತ್ಯದ ವೇಳೆಗೆ 97133 ವಿದ್ಯುತ್ ಕೈಮಗ್ಗ ನೇಕಾರರು ಇದ್ದಾರೆ.

    ಕೈಮಗ್ಗಕ್ಕೆ ಉತ್ತೇಜನ ನೀಡಲು ಸರ್ಕಾರ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ಪ್ರತಿ ವರ್ಷ ನೇಕಾರರಿಗೆ ರೂ.5000 ಹಣ ನೇರವಾಗಿ ಖಾತೆ ಜಮೆ ಮಾಡಲಾಗುವುದು.ಅಗತ್ಯ ಸಲಕರಣೆ ಖರೀದಿಗೆ ಶೇ.50 ರಷ್ಟು ಸಹಾಯಧನ, ಕಚ್ಚಾ ಮಾಲು ಖರೀದಿಗೆ ಕೈಮಗ್ಗ ಸಹಕಾರಿ ಸಂಘಗಳಿಗೆ ರೂ.15 ಸಹಾಯಧನ, ಸಹಕಾರಿ ಬ್ಯಾಂಕುಗಳ ಮೂಲಕ ಶೇ.1 ರಿಂದ 3ರ ವರೆಗಿನ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡಲಾಗಿದೆ. ಕೈಮಗ್ಗ ಅಭಿವೃದ್ದಿಗಾಗಿ ಕರ್ನಾಟಕ ಕೈಮಗ್ಗ ಅಭಿವೃದ್ದಿ ನಿಗಮ, ಕರ್ನಾಟಕ ರಾಜ್ಯ ಜವಳಿ ಸೌಲಭ್ಯ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದೆ ಎಂದರು.

    ಶಾಸಕ ಚನ್ನರಾಜ್ ಬಸವರಾಜ್ ಹಟ್ಟಿಹೊಳಿ ಮಾತನಾಡಿ, ರಾಜ್ಯದ ಕೈಮಗ್ಗ ನೇಕಾರರಿಗೆ ತಮಿಳುನಾಡು ಮಾದರಿಯಲ್ಲಿ ವ್ಯವಸ್ಥೆ ಕಲ್ಪಿಸಬೇಕು. ವಿದ್ಯುತ್ ಬಿಲ್ ಪಾವತಿ ಮೇಲಿನ ಸಹಾಯ ಧನ ವಿತರಣೆ ಬದಲಿಗೆ, ರಿಯಾಯಿತಿ ದರದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು.ಬೆಳಗಾವಿಯ ಸಾಲಿಗ್ರಾಮದಲ್ಲಿ ಶೇ.90ಕ್ಕೂ ಹೆಚ್ಚು ಕುಟುಂಬಗಳು ನೇಕಾರಿಯಲ್ಲಿ ತೊಡಗಿವೆ. ಹಲವು ವರ್ಷಗಳ ಅವಧಿಯಲ್ಲಿ ಸುಮಾರು 25 ರಿಂದ 30 ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಬಗ್ಗೆ ಸರ್ಕಾರ ವಿಶೇಷ ಗಮನಹರಿಸಿ ಕ್ರಮ ಕೈಗೊಳ್ಳಬೇಕು ಎಂದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!

    August 13, 2026

    ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!

    August 13, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ಮಧುಗಿರಿ: ತಾಲೂಕಿನ ರೈತರು, ಕೂಲಿ ಕಾರ್ಮಿಕರು ಬರಗಾಲ ಬರುತ್ತದೆ ಎಂದು ಭಯ ಪಡುವ ಅಗತ್ಯವಿಲ್ಲ, ನಮ್ಮ ಕಾಂಗ್ರೆಸ್ ಸರ್ಕಾರ ಹಾಗೂ…

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.