nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ ತಾಲ್ಲೂಕು ಆಸ್ಪತ್ರೆಯಲ್ಲಿ ಲಂಚ ಕೊಟ್ಟರೆ ನಕಲಿ ವಯಸ್ಸಿನ ದೃಢೀಕರಣ ಪತ್ರ: ದೂರು ದಾಖಲು
    ಮಧುಗಿರಿ December 28, 2022

    ಮಧುಗಿರಿ ತಾಲ್ಲೂಕು ಆಸ್ಪತ್ರೆಯಲ್ಲಿ ಲಂಚ ಕೊಟ್ಟರೆ ನಕಲಿ ವಯಸ್ಸಿನ ದೃಢೀಕರಣ ಪತ್ರ: ದೂರು ದಾಖಲು

    By adminDecember 28, 2022No Comments2 Mins Read

    ಮಧುಗಿರಿ: ತಾಲ್ಲೂಕು ಆಸ್ಪತ್ರೆಯಲ್ಲಿ ನಿರಂತರವಾಗಿ ಲಂಚದ ಹಣಕ್ಕಾಗಿ ನಡೆಯುತ್ತಿರುವ ನಕಲಿ ವಯಸ್ಸಿನ ದೃಢೀಕರಣ ಪತ್ರ ಮತ್ತು ಅಂಗವಿಕಲ ದೃಡೀಕರಣ ಪತ್ರ ನೀಡುತ್ತಿರುವ ಬಗ್ಗೆ ಈ ದಿನ ಮಧುಗಿರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ ಠಾಣಾಧಿಕಾರಿಗಳು FIR ದಾಖಲಿಸುವ ಭರವಸೆ ನೀಡಿದ್ದಾರೆ ಒಂದು ವೇಳೆ FIR ದಾಖಲಿಸದಿದ್ದಲ್ಲಿ ಮುಂದಿನ ಕಾನೂನು ಹೋರಾಟ ಮುಂದುವರೆಸಲಾಗುವುದು ಎಂದು ಸಾಮಾಜಿಕ ಹೋರಾಟಗಾರ ಹಂದ್ರಾಳ್ ನಾಗಭೂಷಣ್ ಹೇಳಿದ್ದಾರೆ.

    ಮಧುಗಿರಿ ಪಟ್ಟಣದ ಲಿಂಗೇನಹಳ್ಳಿ ಬಡಾವಣೆಯ ಹನುಮಂತರಾಯಪ್ಪ ಎಂಬುವರು 2018 ರಲ್ಲಿ ಮರಣ ಹೊಂದಿದ್ದು, ಇವರ ಮಗನಾದ ಮಹೇಶ್ ಎಂಬುವರು ಮೊದಲಿನಿಂದಲೂ ಹೋರಾಟದ ಮನೋಭಾವ ಹೊಂದಿರುವ ಪ್ರಜ್ಞಾವಂತ ನಾಗರಿಕರಾಗಿದ್ದು, ಇಂತಹ ಅಕ್ರಮ ಎಸಗಿರುವವರಿಗೆ ಪಾಠ ಕಲಿಸಬೇಕೆಂಬ ಉದ್ದೇಶದಿಂದ ಸದರಿ ತಾಲ್ಲೂಕು ಆಸ್ಪತ್ರೆಯ ನೌಕರನೆಂದು ಹೇಳಿಕೊಳ್ಳುವ ರಾಜಣ್ಣ ಎಂಬುವ ವ್ಯಕ್ತಿಯನ್ನು ಸಂಪರ್ಕಿಸಿದಾಗ ಸದರಿ ರಾಜಣ್ಣ 5,000 ರೂ. ಹಾಗೂ ಆಧಾರ್ ಕಾರ್ಡ್ ನೀಡಿ ನಿಮ್ಮ ತಂದೆಯವರ ವಯಸ್ಸಿನ ದೃಡೀಕರಣ ಪತ್ರ ಮಾಡಿಸಿ ಕೊಡುತ್ತೇನೆಂದು ತಿಳಿಸಿರುತ್ತಾರೆ.


    Provided by
    Provided by

    madhugiri

    ಅದರಂತೆ ಒಟ್ಟು ಹತ್ತು ಸಾವಿರ ಹಣ ನೀಡಿ ಪ್ರತ್ಯೇಕವಾಗಿ ಎರಡು ಬಾರಿ ಸತ್ತ ಮಹೇಶ್ ತಂದೆಯ ಹೆಸರಿಗೆ ವಯಸ್ಸಿನ ದೃಢೀಕರಣ ಪತ್ರವನ್ನು ಇಬ್ಬರು ವೈದ್ಯರ ಸಹಿಯೊಂದಿಗೆ ಹಾಗೂ ಕಛೇರಿ ಮೊಹರಿನೊಂದಿಗೆ ಪಡೆದಿರುತ್ತಾರೆ. ಇದರಲ್ಲಿ ಬಹು ಮುಖ್ಯವಾಗಿ ಗಮನಿಸಬೇಕಾದ ಮುಖ್ಯ ವಿಷಯವೇನೆಂದರೆ, ಈ ಹಿಂದೆ ಹೋರಾಟಗಾರನಾದ ನಾನು ಇದೇ ತಾಲ್ಲೂಕು ಆಸ್ಪತ್ರೆಯಲ್ಲಿ ದೃಡೀಕರಣ ಪತ್ರ ನೀಡಲು ಹಣ ಪಡೆದು ನೀಡುತ್ತಿದ್ದಾರೆಂಬ ಆರೋಪ ಹೊರಿಸಿ ತುಮಕೂರು DHO ರವರಿಗೆ ದೂರು ನೀಡಿದ ಮೇರೆಗೆ ಅಂದಿನ DHO ರವರು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳಿಂದ ವಿಚಾರಣೆಗೆ ನಿರ್ದೇಶಿದಾಗ ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಆಡಳಿತ ವೈದ್ಯಾಧಿಕಾರಿ ಗಂಗಾಧರ್, ಡಾ:ಪುರುಷೋತ್ತಮ್, ಡಾ:ಮಹೇಶ್ ಸಿಂಗ್, ಡಾ: ರತ್ನಾವತಿ ಎಂಬುವರನ್ನು ವಿಚಾರಣೆಗೆ ಒಳ ಪಡಿಸಿ ಸದರಿ ಆಸ್ಪತ್ರೆಯಲ್ಲಿನ ಮದ್ಯವರ್ತಿಗಳ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲು ಆಡಳಿತ ವೈದ್ಯಾಧಿಕಾರಿಗೆ ಎಚ್ಚರಿಕೆ ನೀಡಲಾಗಿತ್ತು ಆದರೆ ಇಲ್ಲಿನ ಆಸ್ಪತ್ರೆಯ ವೈದ್ಯರುಗಳು ಹಳೆಯ ಚಾಳಿ ಮುಂದುವರೆಸಿದ್ದರು ಎಂದು ಹೇಳಲಾಗಿದೆ ಎಂದು ಹಂದ್ರಾಳ್ ನಾಗಭೂಷಣ್ ತಿಳಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    March 5, 2026

    ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ

    March 5, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ತುಮಕೂರು: ಕೆರೆಗಳ ಗೋಡು ಮಣ್ಣನ್ನು ತಮ್ಮ ತೋಟಗಳಿಗೆ ಹಾಕಿಕೊಳ್ಳಲು ರೈತರಿಗೆ ಅನುಮತಿ ನೀಡಬೇಕು. ಕೈಗಾರಿಕೆ ಹೆಸರಿನಲ್ಲಿ ರೈತರ ಫಲವತ್ತಾದ ಭೂಮಿಯನ್ನು…

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.