ಶಿಕ್ಷಕ ಮದ್ಯ ಸೇವಿಸಿ ಶಾಲೆಗೆ ಬಂದು ತರಗತಿಯಲ್ಲಿ ನೆಲದ ಮೇಲೆ ಮಲಗಿರುವ ಘಟನೆ ನಡೆದಿದೆ.
ಕರ್ನಾಟಕ ರಾಜ್ಯದ ಉಡುಪಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪುರಸಭೆ ವ್ಯಾಪ್ತಿಯ ಅಲಂಗಾರು ಸರ್ಕಾರಿ ಶಾಲೆಯಲ್ಲಿ ಕೃಷ್ಣಮೂರ್ತಿ ಎಂಬ ವ್ಯಕ್ತಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ವೇಳೆ ಬುಧವಾರ ಕುಡಿದು ಶಾಲೆಗೆ ಬಂದಿದ್ದರು. ಕುಡಿದ ಮತ್ತಿನಲ್ಲಿ ತರಗತಿಯ ನೆಲದ ಮೇಲೆಯೇ ನಿದ್ದೆಗೆ ಜಾರಿದರು.
ಇದನ್ನು ಗಮನಿಸಿದ ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಶಿಕ್ಷಕರನ್ನು ಎಬ್ಬಿಸಲು ಯತ್ನಿಸಿದ್ದಾರೆ. ಆದರೆ ಶಿಕ್ಷಕರು ಎಚ್ಚೆತ್ತುಕೊಳ್ಳಲಿಲ್ಲ. ಅವರನ್ನು ಅಮಾನತುಗೊಳಿಸಬೇಕು ಎಂದು ವಿದ್ಯಾರ್ಥಿಗಳ ಪೋಷಕರು ಒತ್ತಾಯಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


