ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ಗುಜರಾತ್ನ ಅಹಮದಾಬಾದ್ನಲ್ಲಿ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ 100 ವರ್ಷ ವಯಸ್ಸಾಗಿತ್ತು.
ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ನಗರದ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಶುಕ್ರವಾರ ನಿಧನರಾಗಿದ್ದಾರೆ. ಹೀರಾಬೆನ್ ಮೋದಿ ಅವರು 2022ರ ಜೂನ್ 18ರಂದು 100ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು. ಪ್ರಧಾನಿ ಮೋದಿ ಅವರು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿ ತಾಯಿಗೆ ಶುಭಾಶಯ ತಿಳಿಸಿದ್ದರು.
ಹೀರಾಬೆನ್ ನಿಧನಕ್ಕೆ ಗಣ್ಯರೆಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ. ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರ ನಿಧನಕ್ಕೆ ಕೇಂದ್ರ ಸಚಿವ ರಾಜನಾಥ್ ಸಿಂಗ್, ಗುಜರಾತ್ ಸಿಎಂ ಭೂಪೇಂದ್ರ ಪಟೇಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


