ಉತ್ತರಖಂಡ್ ನ ಹರಿದ್ವಾರ ಮಂಗಳೌರ್ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಗಂಭೀರ ಗಾಯಗೊಂಡಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ದೆಹಲಿಯಿಂದ ರೂರ್ಕಿಯಲ್ಲಿರುವ ತಮ್ಮ ನಿವಾಸಕ್ಕೆ ತೆರಳುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿದೆ. ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಸುಟ್ಟು ಕರಕಲಾಗಿದೆ. ರಾಷ್ಟ್ರೀಯ ಹೆದ್ದಾರಿ 58ರಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನ ಗ್ಲಾಸ್ ಒಡೆದು ರಿಷಬ್ ಪಂತ್ ಹೊರಗೆ ಬಂದಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ದೆಹಲಿಯ ಏಮ್ಸ್ ನಲ್ಲಿ ರಿಷಬ್ ಪಂತ್ ಗೆ ಚಿಕಿತ್ಸೆ ನೀಡಲಾಗುತ್ತಿದ್ದು ಬೆನ್ನುಕಾಲು ತಲೆಗೆ ಗಾಯಗಳಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


