ಬೆಂಗಳೂರು : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇಂದು ನಡೆದ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಸಭೆಯಲ್ಲಿ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ.
ಈ ಕುರಿತು ಸಂಪುಟ ಸಭೆ ಬಳಿಕ ಸಚಿವ ಮಾಧುಸ್ವಾಮಿ ಈ ಮಾಹಿತಿ ನೀಡಿದ್ದು, ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವುದಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಅವರು ಹೇಳಿದ್ದಾರೆ.
ಇನ್ನು ಪಂಚಮಸಾಲಿ ಮೀಸಲಾತಿಗೆ ಒತ್ತಾಯಿಸಿ ಪಂಚಮಸಾಲಿ ಸಮುದಾಯದ ಮುಖಂಡರು ಭಾರೀ ಪ್ರತಿಭಟನೆ ನಡೆಸಿದ್ದು, ಇಂದಿನ ಸಭೆಯಲ್ಲಿ ಮಹತ್ವದ ನಿರ್ಧಾರ ಪ್ರಕಟವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


