ಬೆಂಗಳೂರು: ಕಬ್ಬು ಬೆಳೆಗಾರರ ನಿರಂತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 100 ರೂಪಾಯಿ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಪ್ರತಿ ಟನ್ ಕಬ್ಬಿಗೆ 50 ರೂ. ಎಫ್ ಆರ್ ಪಿ ಹೆಚ್ಚಳ ಮಾಡಿದ್ದರೂ, ಕಬ್ಬು ಬೆಳೆಗಾರರು ಹೋರಾಟ ಮುಂದುವರೆಸಿದ್ದರಿಂದ ರಾಜ್ಯ ಸರ್ಕಾರ ಮೊಲಾಸಿಸ್ ಮಾರಾಟದಿಂದ ಕಾರ್ಖಾನೆಗಳಿಗೆ ಬರುವ ಲಾಭಾಂಶದಲ್ಲಿ ಪ್ರತಿ ಟನಗೆ 100 ರೂಪಾಯಿ ಹೆಚ್ಚುವರಿಯಾಗಿ ಪಾವತಿಸುವಂತೆ ಆದೇಶ ಹೊರಡಿಸಿದೆ.
ಕೇಂದ್ರ ಸರ್ಕಾರ ಪ್ರತಿ ಟನ್ ಕಬ್ಬಿಗೆ 3050 ರೂಪಾಯಿ ಎಫ್ ಆರ್ ಪಿ ನಿಗದಿಗೊಳಿಸಿತ್ತು. ಹೀಗಾಗಿ ಕಬ್ಬಿನ ದರ ಹೆಚ್ಚಳ ಮಾಡುವಂತೆ ಬೆಳೆಗಾರರು ಬೆಳಗಾವಿ ಸೇರಿದಂತೆ ಹಲವೆಡೆ ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಸರ್ಕಾರ ಎಥೆನಾಲ್ ಉತ್ಪಾದಿಸುವ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ 50 ರೂಪಾಯಿ ಹೆಚ್ಚಿಸಿ ಆದೇಶ ಹೊರಡಿಸಿತ್ತು.
ಇದಕ್ಕೆ ಒಪ್ಪದ ಕಬ್ಬು ಬೆಳೆಗಾರರು ಹೋರಾಟ ಮುಂದುವರೆಸಿದ್ದರು. ಗುರುವಾರ ಹೊಸ ಆದೇಶ ಹೊರಡಿಸಲಾಗಿದ್ದು, ಮೊಲಾಸಿಸ್ ಮಾರಾಟದಿಂದ ಸಕ್ಕರೆ ಕಾರ್ಖಾನೆಗಳಿಗೆ ಬರುವ ಲಾಭಾಂಶ ಮತ್ತು ಸಾಗಾಣಿಕೆ ವೆಚ್ಚ ಹೆಚ್ಚಳ ಮಾಡಿರುವುದನ್ನು ಪರಿಗಣಿಸಿ ಹೆಚ್ಚುವರಿಯಾಗಿ ಪ್ರತಿ ಟನ್ ಗೆ 100 ರೂಪಾಯಿ ಪಾವತಿಸುವಂತೆ ಸೂಚಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


