ಎರಡು ವರ್ಷಗಳ ಬಳಿಕ ಸಂಭ್ರಮದ ಹೊಸ ವರ್ಷಾಚರಣೆಗೆ ಇಡೀ ಜಗತ್ತು ಸಿದ್ಧವಾಗಿದೆ. ಕಳೆದೆರಡು ವರ್ಷಗಳಲ್ಲಿ ಕೊವಿಡ್ ಹಿನ್ನೆಲೆಯಲ್ಲಿ ಸಾರ್ವಜನಿಕರ ಸಂಭ್ರಮಕ್ಕೆ ಅವಕಾಶ ನೀಡಿರಲಿಲ್ಲ. ಈ ಬಾರಿ ಅದ್ದೂರಿ ಹೊಸ ವರ್ಷಾಚರಣೆಗೆ ಸಕಲ ಸಿದ್ಧತೆ ನಡೆದಿದೆ.
2021 ಮತ್ತು 2022ರಲ್ಲಿ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕೊವಿಡ್ ಮಾರ್ಗ ಸೂಚಿಗಳು ಸಂಪೂರ್ಣವಾಗಿ ಬ್ರೇಕ್ ಹಾಕಿದ್ದವು. ಈ ಬಾರಿ ಕೂಡ ಹೊಸ ವರ್ಷಾಚರಣೆಯ ಸಂದರ್ಭದಲ್ಲಿಯೇ ಕೊವಿಡ್ ನ ಹೆಸರು ಕೇಳಿ ಬಂದಿತ್ತು. ಆದರೆ ಸರ್ಕಾರವು ಮುಂಜಾಗೃತಾ ಕ್ರಮದೊಂದಿಗೆ ಹೊಸ ವರ್ಷಾಚರಣೆಗೆ ಅವಕಾಶ ನೀಡಿರುವುದು ಸಾರ್ವಜನಿಕರಿಗೆ ಅನುಕೂಲಕರವಾಗಿದೆ.
2022ರ ಡಿಸೆಂಬರ್ 31ರ ದಿನವಾದ ಇಂದು ಮಧ್ಯರಾತ್ರಿ 12 ಗಂಟೆಗೆ ಸಾರ್ವಜನಿಕರು ತಮ್ಮ ಅಭಿರುಚಿಗೆ ತಕ್ಕಂತೆ ಹೊಸ ವರ್ಷವನ್ನು ಸಂಭ್ರಮಿಸಲಿದ್ದಾರೆ. ಈಗಾಗಲೇ ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಜನರು ಸಂಭ್ರಮಿಸಲು ಸಕಲ ಸಿದ್ಧತೆಯಲ್ಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


