ಹೆಚ್.ಡಿ.ಕೋಟೆ: ಕಾಡಾನೆ ದಾಳಿಗೆ ಅರಣ್ಯ ಇಲಾಖೆ ರಾತ್ರಿ ಕಾವಲುಗಾರ ಸಾವನ್ನಪ್ಪಿದ ಘಟನೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹೆಚ್.ಡಿ.ಕೋಟೆ ಮೇಟಿಕುಪ್ಪೆ ಅರಣ್ಯ ಪ್ರದೇಶದ ಸೊಳ್ಳಾಪುರ ಬಳಿ ಘಟನೆ ನಡೆದಿದೆ.
ಮಹದೇವಸ್ವಾಮಿ (36) ಮೃತಪಟ್ಟ ಕಾವಲುಗಾರರಾಗಿದ್ದಾರೆ. ಇವರು ಸುಮಾರು ಹತ್ತು ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಹಂಗಾಮಿ ಕಾವಲುಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಘಟನೆ ನಡೆದ ವೇಳೆ ಮಹದೇವಸ್ವಾಮಿ ಹಾಗೂ ಮತ್ತೊಬ್ಬ ವಾಚರ್ ರಾಜೇಶ ಎಂಬವರಿದ್ದರು. ಆದರೆ ರಾಜೇಶ್ ಅವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಮಹದೇವಸ್ವಾಮಿ ಮೃತದೇಹ ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಆಸ್ಪತ್ರೆ ಆವರಣದಲ್ಲಿ ಮೃತನ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.
ವರದಿ: ಮಲಾರ ಮಹದೇವಸ್ವಾಮಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


